ಕೊಡವೂರು ಶಂಕರನಾರಾಯಣ ದೇವಸ್ಥಾನ: ಕೃತಜ್ಞತ ಸಭೆ, ಸ್ಮರಣ ಸಂಚಿಕೆ ಬಿಡುಗಡೆ
ಮಲ್ಪೆ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ರಾಶಿಪೂಜಾ ಮಹೋತ್ಸವಕ್ಕೆ ಅಹರ್ನಿಶಿ ದುಡಿದ ಪ್ರಮುಖರಿಗೆ ಕೃತಜ್ಞತೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಸೋಮವಾರ ನಡೆಯಿತು. ದೇವಳದ ತಂತ್ರಿ ಪೂತ್ತೂರು ಹಯವದನ ತಂತ್ರಿ ಅವರು ದೇಗುಲದನ ವ್ಯವಸ್ಥಾಪನಾ ಸಮಿತಿಯ ೩ವರ್ಷ ಅವಽಯ ಕೆಲಸ ಕಾರ್ಯದ ವಿವರ ಹಾಗೂ ರಾಶಿಪೂಜೆ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡವೂರು ಶ್ರೀ ಶಂ. ಭಕ್ತವೃಂದದ […]
ಉಡುಪಿ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಮೂವರ ಬಂಧನ
ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲಿನ ರೂಮ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಡಿಸಿಐಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶೇಖರ ಶೆಟ್ಟಿ, ಜೋನ್ಸನ್ ಡಿ ಅಲ್ಮೇಡ , ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮನು, ರಾಜು ಮತ್ತು ಉದ್ಯಮಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಎಂಬವರು ಒಟ್ಟು ಸೇರಿ ಹೊಟೇಲಿನ ರೂಪಿನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರು […]
ಕೊರೊನಾ ಹೆಚ್ಚಳ: ಮಣಿಪಾಲದ ಎಂಐಟಿ ಕಂಟೈನ್ ಮೆಂಟ್ ಝೋನ್
ಉಡುಪಿ: ಮಣಿಪಾಲದ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಹಾಗೂ ಮಾಹೆ ಪರಿಸರದಲ್ಲಿ ಕೋವಿಡ್-19 ಪಾಸಿಟಿವ್ ಬರುತ್ತಿರುವವರ ಸಂಖ್ಯೆಯ ಭಾರೀ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಂಐಟಿ ಕ್ಯಾಂಪಸ್ ಪರಿಸರವನ್ನು ಕಂಟೈನ್ ಮೆಂಟ್ ಝೋನ್ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಕಳೆದ ಐದಾರು ದಿನಗಳಿಂದ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದಿರುವವರಲ್ಲಿ ಶೇ.75ಕ್ಕೂ ಅಧಿಕ ಮಂದಿ ಮಣಿಪಾಲ ದವರಾಗಿದ್ದಾರೆ. ನಿನ್ನೆ ಪಾಸಿಟಿವ್ ಬಂದ 32 ಮಂದಿಯಲ್ಲಿ 27 ಮಂದಿ ಹಾಗೂ ಇಂದು ಪಾಸಿಟಿವ್ ಬಂದ 42ರಲ್ಲಿ 26 ಮಂದಿ ಎಂಐಟಿಯ ವಿದ್ಯಾರ್ಥಿಗಳೇ ಇದ್ದಾರೆ ಎಂದು […]
ರಾಜ್ಯದಲ್ಲಿ ಲಾಕ್ ಡೌನ್, ನೈಟ್ ಕರ್ಫ್ಯೂ ಇಲ್ಲ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವ ಯಾವುದೇ ಉದ್ಧೇಶ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಮದುವೆ, ಬರ್ತ್ ಡೇ ಪಾರ್ಟಿ ಮತ್ತಿತರ ಕಾರ್ಯಕ್ರಮಗಳು ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ. ಆದರೆ, ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ತಿಳಿಸಿದರು. ನಾಲ್ಕು ಗೋಡೆಗಳ ಒಳಗೆ […]
ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರ ತೆರವು: ಪ್ರಶ್ನಿಸಿದ ಸದಸ್ಯರು, ಗ್ರಾಮಸ್ಥರ ಮೇಲೆ ಜಾತಿ ನಿಂದನೆ ಕೇಸ್
ಉಡುಪಿ: ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡದೆ ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರವನ್ನೇ ಬದಲಾವಣೆ ಮಾಡಿರುವುದನ್ನು ಪ್ರಶ್ನಿಸಿದ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ಮೇಲೆ ಗ್ರಾಪಂ ಅಧ್ಯಕ್ಷರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದು ಖಂಡನೀಯ. ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಅಧ್ಯಕ್ಷರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಗ್ರಾಪಂ ಸದಸ್ಯ ಪ್ರಖ್ಯಾತ್ ಶೆಟ್ಟಿ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಜನರಿಂದ ಆಯ್ಕೆಯಾದ ಸದಸ್ಯರಿಗೆ ಪಂಚಾಯತ್ ನಲ್ಲಿ ನಡೆದ ತಪ್ಪನ್ನು ಪ್ರಶ್ನಿಸುವ ಹಕ್ಕಿದೆ. ಆದರೆ ಬಿಜೆಪಿ ಬೆಂಬಲಿತ ಅಧ್ಯಕ್ಷರು ಸೂಕ್ತ ಉತ್ತರ […]