ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಉಡುಪಿ: ಇಲ್ಲಿನ ಕುಂಜಿಬೆಟ್ಟಿನ ವಸತಿಗೃಹವೊಂದರ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹30 ಸಾವಿರ ಮೌಲ್ಯದ 1050 ಗ್ರಾಂ ತೂಕ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕೆ.ಎಸ್. ಗೌತಮ್ ಗೌಡ (23), ವಿಕ್ಕಿ ದಯಾಳ್ ಯಾನೆ ವಿಕ್ಕಿ (21) ಎಂದು ಗುರುತಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡವೂರು ಬ್ರಾಹ್ಮಣ ಮಹಾಸಭಾ: ಎ.14ಕ್ಕೆ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭ
ಮಲ್ಪೆ: ಕೊಡವೂರು ಬ್ರಾಹ್ಮಣ ಮಹಾಸಭಾ ಸ್ಥಾಪನೆಯಾಗಿ 2022ಕ್ಕೆ 25 ಸಾರ್ಥಕ ಸಂವತ್ಸರಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 2021ರ ಎಪ್ರಿಲ್ ತಿಂಗಳಿನಿಂದ 2022ರ ಎಪ್ರಿಲ್ ತಿಂಗಳವರೆಗೆ ಒಂದು ವರ್ಷದ ಕಾಲ “ರಜತ ಪಥದಲ್ಲಿ ವಿಪ್ರ ನಡಿಗೆ” ಎಂಬ ಶಿರೋನಾಮೆಯಡಿಯಲ್ಲಿ ರಜತೋತ್ಸವವನ್ನು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಈ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭವು ಎಪ್ರಿಲ್ 14ರಂದು ನಡೆಯಲಿದೆ ಎಂದು ಮಹಾಸಭಾ ತಿಳಿಸಿದೆ. ಇದೇ ಸಂದರ್ಭದಲ್ಲಿ ಶಾಶ್ವತ ಕಾರ್ಯಕ್ರಮವಾಗಿ ಸಂಸ್ಥೆಯ ಸಾಂಸ್ಕೃತಿಕ ಕಲಾಭವನ “ವಿಪ್ರಶ್ರೀ” ಯ […]
ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಅನಿಲ್ ಪೂಜಾರಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನಿಟ್ಟೆ ಗ್ರಾಮದ ಬಜರಂಗದಳದ ತಾಲೂಕು ಸಂಚಾಲಕ ಸುನಿಲ್, ವಲಯ ಸಂಚಾಲಕ ಶರತ್ ಹಾಗೂ ತಾಲೂಕು ಗೋರಕ್ಷಾ ಪ್ರಮುಖ್ ಪ್ರಸಾದ್ ಬಂಧಿತ ಆರೋಪಿಗಳು. ಇವರು ಭಾನುವಾರ ರಾತ್ರಿ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಅವರ ಮನೆಗೆ ನುಗ್ಗಿ ತಲವಾರಿನಿಂದ ಹಲ್ಲೆ ನಡೆಸಿದ್ದರು. ಆರೋಪಿಗಳ ಪೈಕಿ ಇನ್ನಿಬ್ಬರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಕೊಡವೂರು: ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಾಗಾರದ ಸಮಾರೋಪ
ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘ ಕೊಡವೂರು ಇವರ ಸಹಯೋಗದೊಂದಿಗೆ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಆಯೋಜಿಸಿದ ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಾಗಾರದ ಸಮಾರೋಪ ಸಮಾರಂಭದ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಆಕಾಶ್ ರಾಜ್ ಜೈನ್ ಮಾತನಾಡಿ, ತುಲು ಲಿಪಿ ಇನ್ನಷ್ಟು ಆಧುನಿಕತೆ ತಂತ್ರಜ್ಞಾನಕ್ಕೆ ಬಂದು ಪ್ರತಿ ಊರುಗಳಲ್ಲಿಯೂ ಪರಿಚಯ ಆಗುವಂತೆ […]
ಮಾ. 20ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ. ಸುಶೀಲಾ ಉಪಾಧ್ಯಾಯ ಸಂಸ್ಮರಣೆ
ಉಡುಪಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೋಟ ಡಾ.ಕಾರಂತ ಪ್ರತಿಷ್ಠಾನದ ಸಹಕಾರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬ್ಯಾರಿ ಭಾಷಿಕರ ವರ್ಣನಾತ್ಮಕ ವ್ಯಾಕರಣ ಮತ್ತು ತೌಲನಕ ಅಧ್ಯಯನ ಗ್ರಂಥ ರಚಿಸಿ ಪಿಎಚ್‌ಡಿ ಪಡೆದ ಹಾಗೂ ಅಕಾಡೆಮಿಯ ಪ್ರಥಮ ಅವಧಿಯ ಸದಸ್ಯರು ಆಗಿದ್ದ ಡಾ. ಪಿ. ಸುಶೀಲ ಉಪಾಧ್ಯಾಯರವರ ಸಂಸ್ಮರಣಾ ಕಾರ್ಯಕ್ರಮವು ಮಾರ್ಚ್ 20ರಂದು ಮಧ್ಯಾಹ್ನ 2 ಗಂಟೆಗೆ ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಉಡುಪಿ […]