ಹಿರಿಯ ಪಿಂಚಣಿದಾರರಿಗೆ ಬಿಗ್ ರಿಲೀಫ್ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಥವಾ ಪಿಂಚಣಿ ಸಂಗ್ರಹಿಸಲು ಅಗತ್ಯವಿರುವ ಜೀವನ ಪ್ರಮಾಣಪತ್ರ ಪಡೆಯಲು ಇನ್ನು ಮುಂದೆ ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರದ ನಿರ್ಧಾರದಿಂದ ಹಿರಿಯ ಪಿಂಚಣಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜೀವನ ಪ್ರಮಾಣ ಪತ್ರ ಪಡೆಯಲು ಆಧಾರ್ ಕಡ್ಡಾಯವಲ್ಲ. ಆದರೆ ಸ್ವಯಂಪ್ರೇರಿತವಾಗಿ ಆಧಾರ ಸಲ್ಲಿಸಿ ಜೀವನ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಕಾಲಕಾಲಕ್ಕೆ ಯುಐಡಿಎಐ ಹೊರಡಿಸಿದ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳು ಪ್ರಕಾರ ಜೀವನ ಪ್ರಮಾಣ ಪತ್ರ ಪಡೆಯಲು ಆಧಾರ […]

ಬೈಕ್ ಅಪಘಾತ: ಕಾಲೇಜು ವಿದ್ಯಾರ್ಥಿ ಮೃತ್ಯು, ಮತ್ತೋರ್ವ ಗಂಭೀರ

ಪುತ್ತೂರು: ಜಾತ್ರೆಗೆ ಹೋಗಿ ವಾಪಾಸು ಬರುತ್ತಿದ್ದ ವೇಳೆ ಬೈಕ್ ಅಪಘಾತಕ್ಕೀಡಾದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಗಂಭೀರಗಾಯಗೊಂಡ ಘಟನೆ ಸವಣೂರು ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಮಡಿಕೇರಿ ಸೋಮವಾರ ಪೇಟೆ ನಿವಾಸಿ ಬೋಜಪ್ಪ ಮತ್ತು ಉಮಾವತಿ ದಂಪತಿ ಪುತ್ರ ಚೇತನ್ ಮೃತಪಟ್ಟ ವಿದ್ಯಾರ್ಥಿ. ಈತ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದನು. ಈತನ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚೇತನ್ […]