ಕೋವಿಡ್ ನಿಯಮ ಉಲ್ಲಂಘನೆ; ದಂಡ ವಿಧಿಸುವ ಪ್ರಕರಣ ಹೆಚ್ಚಿಸಿ-ಡಿಸಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಆರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಮಂಗಳವಾರ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ […]

ಎ. 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ: ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನವನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅದರಂತೆ ಎಪ್ರಿಲ್ 1ರಿಂದ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲು ತೀರ್ಮಾನಿಸಿದೆ. ಇಂದು ಈ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾಹಿತಿ ನೀಡಿದರು. ಎ.1 ರಿಂದ 45 ವಯಸ್ಸಿನ ಮೇಲ್ಪಟ್ಟವರೂ ಸಹ ಕೊರೊನಾ ಲಸಿಕೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಕೆಲವು ಆರೋಗ್ಯ ಸಮಸ್ಯೆ (co-morbidities) ಇಲ್ಲದವರೂ ಸಹ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಉಡುಪಿ: ಪಿಪಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಸ್.ಎಲ್. ಕರಣಿಕ್ ನಿಧನ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಸ್ಯಶಾಸ್ತ್ರಜ್ಞ ಡಾ. ಎಸ್.ಎಲ್. ಕರಣಿಕ್ (81) ಮಂಗಳವಾರ  ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ ಕುಂದಾಪುರ ತಾಲೂಕಿನ ಸುಳ್ಸೆಯವರಾಗಿರುವ ಡಾ. ಕರಣಿಕ್, ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥ ಮತ್ತು ಪ್ರಾಚಾರ್ಯರಾಗಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಹವ್ಯಕ ಸಭಾ ಉಡುಪಿಯ ಅಧ್ಯಕ್ಷ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಉಪಾಧ್ಯಕ್ಷ, ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಮಲ್ಲಂಪಳ್ಳಿ ವಿಷ್ಣುಮೂರ್ತಿ ಕ್ಷೇತ್ರಾಭಿವೃದ್ಧಿ ಸಮಿತಿ ಉಪಾಧ್ಯಕ್ಷ […]

ಮುದ್ರಾಡಿ: ಮಾ. 28ಕ್ಕೆ ಉಚಿತ ಕಣ್ಣಿನ ತಪಾಸಣಾ ಶಿಬಿರ

ಮುದ್ರಾಡಿ: ಮುದ್ರಾಡಿ ಗ್ರಾಪಂ ಹಾಗೂ ಹೆಬ್ರಿ ಕಣ್ಣಿನ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಮಾ. 28ರ ಭಾನುವಾರ ಬೆಳಿಗ್ಗೆ 9.30ರಿಂದ 1.30ರ ವರೆಗೆ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ‌ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಣ್ಣಿನ ಪೊರೆ ತಪಾಸಣೆ, ಕಣ್ಣಿನ ಇತರ ಸಮಸ್ಯೆಗಳ ತಪಾಸಣೆ ಹಾಗೂ ಚಿಕಿತ್ಸೆ ಅಗತ್ಯವಿರುವ ಶಿಬಿರಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವ್ಯವಸ್ಥೆ ಮಾಡಿಕೊಡಲಾಗುವುದು. ಹಾಗೆ ಪೊರೆ ಶಸ್ತ್ರ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಿಕೊಡಲಾಗುವುದು. ಕಣ್ಣಿನ ಪೊರೆ ಸಮಸ್ಯೆ ಇದ್ದವರು […]

ಟಿಪ್ಪರ್ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಬ್ರಹ್ಮಾವರ: ಇಲ್ಲಿನ ಶೀರೂರು ಗ್ರಾಮದ ಹೆಮ್ಮಣ್ಕಿ ಕ್ರಾಸ್ ಬಳಿ ಟಿಪ್ಪರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಣೇಶ್(20) ಎಂದು ಗುರುತಿಸಲಾಗಿದೆ. ಶಿರೂರು ಮೂರುಕೈ ಕಡೆಯಿಂದ ಕಿರಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್, ತಿರುವಿನಲ್ಲಿ ಮಂದಾರ್ತಿ ಕಡೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಗಣೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಣೇಶ್ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ […]