ಹುಟ್ಟೂರಿನ ಗೌರವ ಕಲಾವಿದನಿಗೆ ಬಹಳ ಹೆಮ್ಮೆ ತರುವ ವಿಚಾರ: ಬಾಲಕೃಷ್ಣ ಶೆಟ್ಟಿ
ಅಜೆಕಾರು: ಅಮ್ಮನ ಪ್ರೀತಿ ಮತ್ತು ಹುಟ್ಟೂರಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಒಬ್ಬ ಕಲಾವಿದನಿಗೆ ಹುಟ್ಟೂರಿನ ಗೌರವ ಬಹಳ ಹೆಮ್ಮೆ ತರುವ ವಿಚಾರ ಎಂದು ಅಜೆಕಾರು ಕಲಾಭಿಮಾನಿ ಬಳಗ ಅಧ್ಯಕ್ಷ ಮುಂಬಯಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಅಜೆಕಾರು ರಾಮಮಂದಿರದಲ್ಲಿ ನಡೆದ ಪ್ರಾದೇಶಿಕ ಸಮಿತಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ನಿವೃತ್ತ ಶಿಕ್ಷಕ ಭಾಸ್ಕರ ಶೆಟ್ಟಿ ಕುಂಟಿನಿ ದೀಪ ಬೆಳಗಿ ನೂತನ ಸಮಿತಿಗೆ ಚಾಲನೆ ನೀಡಿದರು. ಉದ್ಯಮಿ ಅಜೆಕಾರು ವಿಜಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ವಿದ್ವಾಂಸ ಮತ್ತು ಅರ್ಥಧಾರಿ […]
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತ್ಯು
ಬೆಳ್ತಂಗಡಿ: ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.