ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್: ₹ 1 ಕೋಟಿ ಮೌಲ್ಯದ ಸೇವಾ ಯೋಜನೆಗಳ ವಿತರಣೆ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಆಶ್ರಯದಲ್ಲಿ ಮಣಿಪಾಲ ಸಿಗ್ನಾ ಪ್ರೋಹೆಲ್ತ್ ಗ್ರೂಪ ಇನ್ಶೂರೆನ್ಸ್ ಕಾರ್ಡ್, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಮುಳಿಹಿತ್ಲು ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆಯಿತು. ಉಡುಪಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ 5 ವರ್ಷಗಳಿಂದ ಈ ಕಾರ್ಯಕ್ರಮಕ್ಕೆ ನಾನು ಆಗಮಿಸುತ್ತಿದ್ದು, ಯಶ್‍ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಉತ್ತಮ ಕೆಲಸಗಳು ನಡೆಯುತ್ತಿದೆ. ಜಾತಿ ಧರ್ಮದ […]
ಉಡುಪಿ: 115 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರಿಸಿದ್ದು, ಇಂದು ಕೂಡ 115 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಂಟೈನ್ ಮೆಂಟ್ ಝೋನ್ ಆಗಿರುವ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 70 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಉಡುಪಿ ತಾಲೂಕಿನಲ್ಲಿ 84, ಕುಂದಾಪುರದಲ್ಲಿ 24 ಹಾಗೂ ಕಾರ್ಕಳದಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಇಂಗ್ಲೆಂಡ್ ಗೆ 330 ರನ್ ಗಳ ಟಾರ್ಗೆಟ್ ನೀಡಿದ ಭಾರತ: ಇಂಗ್ಲೆಂಡ್ ಗೆ ಆರಂಭಿಕ ಆಘಾತ
ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 329 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ. ಶಿಖರ್ ಧವನ್ (67), ರಿಷಬ್ ಪಂತ್ (78), ಹಾರ್ದಿಕ್ ಪಾಂಡ್ಯ (64) ಅವರ ಸ್ಫೋಟಕ ಆಟದ ನೆರವಿನಿಂದ ಆಂಗ್ಲರಿಗೆ 330 ರನ್‌ಗಳ ಗುರಿ ನೀಡಿದೆ. ಇಂಗ್ಲೆಂಡ್ ಪರ ಮಾರ್ಕ್ ವುಡ್ 3, ಆದಿಲ್ ರಶೀದ್ 2, ಸ್ಯಾಮ್ ಕರನ್, ರೀಸ್ ಟಾಪ್ಲೆ, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್ […]
ಕಂಬಳದಲ್ಲಿ ಮತ್ತೊಂದು ಅಪ್ರತಿಮ ದಾಖಲೆ; 8.78 ಸೆಕೆಂಡ್ ನಲ್ಲಿ ಓಡಿದ ಶ್ರೀನಿವಾಸ ಗೌಡ
ಮಂಗಳೂರು: ಕಳೆದ ವಾರ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.96 ಸೆಕೆಂಡ್ ನಲ್ಲಿ 100 ಮೀ. ಓಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರು ಮಾ.27-28ರಂದು ಬಂಟ್ವಾಳ ತಾಲೂಕಿನ ಕಕ್ಕೆಪದವು ಉಳಿಯಲ್ಲಿ ನಡೆಯುತ್ತಿರುವ ಸತ್ಯ-ಧರ್ಮ ಜೋಡುಕರೆ ಕಂಬಳದಲ್ಲಿ ಕಳೆದ ವಾರದ ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ. ಫೈನಲ್ ನಲ್ಲಿ ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ ಅವರ ಕೋಣಗಳನ್ನು 8.78 ಸೆಕೆಂಡ್ ನಲ್ಲಿ 100 ಮೀ. ಓಡಿಸುವ ಮೂಲಕ ಈ ಹೊಸ ದಾಖಲೆ […]
ಉಡುಪಿ: ಕ್ರೈಸ್ತ ಬಾಂಧವರಿಂದ ಸರಳವಾಗಿ ಪಾಮ್ ಸಂಡೆ ಆಚರಣೆ
ಉಡುಪಿ: ಕೊರೊನಾ ಎರಡನೇ ಅಲೆಯ ಆತಂಕದ ನಡುವೆ ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ನಿತ್ಯ ಸಹಾಯ ಮಾತೆಯ ಇಗರ್ಜಿ ಕಳತ್ತೂರು ಇಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ಲೊರೇನ್ಸ್ ಬಿ. ಡಿಸೋಜಾ ಮತ್ತು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ […]