ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ

ಬೆಂಗಳೂರು: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಗುರುವಾರ (ಎ.1)ದಿಂದ ₹10ರಷ್ಟು ಇಳಿಕೆಯಾಗಲಿದೆ. ಈ ಬಗ್ಗೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಐಒಸಿಎಲ್‌) ಮಾಹಿತಿ ನೀಡಿದ್ದು, ಅದರಂತೆ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ ₹ 822 ಇದ್ದಿದ್ದು, ₹ 812ಕ್ಕೆ ಇಳಿಕೆಯಾಗಲಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಆಗಿರುವುದರಿಂದ ಎಲ್‌ಜಿಪಿ ದರದಲ್ಲಿಯೂ ಇಳಿಕೆ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಕಳೆದ ಕೆಲ ವಾರಗಳ ಹಿಂದೆ ಸಿಲಿಂಡರ್ ಬೆಲೆಯಲ್ಲಿ […]

ಕಸಾಪ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷೀಯ ಚುನಾವಣೆ: ಸುಬ್ರಹ್ಮಣ್ಯ ಬಾಸ್ರಿ ನಾಮಪತ್ರ ಸಲ್ಲಿಕೆ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಾಸ್ರಿ ಅವರು ಉಡುಪಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾಹಿತಿ ಅಂಬಾತನಯ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿ ನೀಲಾವರ ಸುರೇಂದ್ರ ಅಡಿಗ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇಂದು ಉಡುಪಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಆಯ್ಕೆಯಾಗಿ ಪ್ರಥಮ ಆದ್ಯತೆಯಾಗಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ಬಹುದಿನಗಳ ಬೇಡಿಕೆಯಾದ ಕನ್ನಡ ಭವನಕ್ಕೆ 2 ತಿಂಗಳಲ್ಲಿ ಸರ್ಕಾರದ ಅನುದಾನ ಲಭಿಸದಿದ್ದರೆ, ದಾನಿಗಳಿಂದ ಧನ ಸಂಗ್ರಹಿಸಿ ಗ್ರಂಥಾಲಯ, ಇ-ಗ್ರಂಥಾಲಯ ಸಹಿತ 3 ಕೋಟಿ ರೂ. […]

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ‌ ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ದೂರು

ಬೆಂಗಳೂರು: ತಮ್ಮ ಇಲಾಖೆಗೆ ಸಂಬಂಧಿಸಿದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿರುವ ಈಶ್ವರಪ್ಪ ಅವರು ನಾಲ್ಕು ಪುಟಗಳ ದೂರು ಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ದೂರಿನ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕಳುಹಿಸಿಕೊಟ್ಟಿರುವುದಾಗಿ ಸಚಿವರು ಹೇಳಿದ್ದಾರೆ.

ಕೊಕ್ಕರ್ಣೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ

ಕೊಕ್ಕರ್ಣೆ: ಗ್ರಾಮಾಂತರ ಮಹಿಳಾ ಮೋರ್ಚಾದ ವತಿಯಿಂದ ಕೊಕ್ಕರ್ಣೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ ಈಚೆಗೆ ಕೊಕ್ಕರ್ಣೆ ಗಣೇಶ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೋಭಾ ಹಂದಾಡಿ, ಜಿಲ್ಲಾ ಬಿಜೆಪಿಯ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಗ್ರಾಮಾಂತರ ಬಿಜೆಪಿಯ ಉಪಾಧ್ಯಕ್ಷೆ ಲಕ್ಷ್ಮೀ ಅಡಿಗ ಕೊಕ್ಕರ್ಣೆ […]