ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ
ಉಡುಪಿ: ಗ್ರಾಮಾಂತರ ಮಹಿಳಾ ಮೋರ್ಚಾದ ವತಿಯಿಂದ ಬ್ರಹ್ಮಾವರ ಗ್ರಾಮಾಂತರ ಬಿಜೆಪಿ ಕಚೇರಿಯಲ್ಲಿ ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಸಭೆ ನಡೆಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ಮಹಿಳಾ ಮೋರ್ಚಾದ […]
ಈ ಗ್ರೀನ್ ಜ್ಯೂಸ್ ಕುಡಿದರೆ ವಿವಿಧ ಆರೋಗ್ಯ ಸಮಸ್ಯೆ ನಿಮ್ಮ ಹತ್ರವೂ ಸುಳಿಯೋದಿಲ್ಲ!
«ಸಿಂಥಿಯಾ ಮೆಲ್ವಿನ್ ಪ್ರಕೃತಿ ಎನ್ನುವುದು ದೇವರು ಕೊಟ್ಟ ವರ. ನಮ್ಮ ಸುತ್ತಮುತ್ತಲಿರುವ ಹಲವು ಗಿಡ-ಮರದ ಎಲೆಗಳಲ್ಲಿ ಹಲವು ಬಗೆಯ ಔಷಧೀಯ ಗುಣಗಳನ್ನು ದೇವರು ನಮಗಾಗಿ ಸೃಷ್ಟಿಸಿದ್ದಾನೆ. ಚಿಕ್ಕ-ಚಿಕ್ಕ ಖಾಯಿಲೆಗೂ ದೊಡ್ಡ-ದೊಡ್ಡ ಆಸ್ಪತ್ರೆಗೆ ಮೊರೆ ಹೋಗುವ ಈ ಕಾಲದಲ್ಲಿ ಕುಂತ್ರೆ-ನಿಂತ್ರೆ ಮಾತ್ರೆ ತೆಗೆದುಕೊಳ್ಳುವ ಚಟ ನಮ್ಮದಾಗಿದೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತಮ್ಮ ಸುತ್ತ-ಸುತ್ತಲಿರುವ ಗಿಡಮೂಲಿಕೆ ಎಲೆ, ಬೇರುಗಳನ್ನು ಉಪಯೋಗಿಸಿ ಹಲವು ಖಾಯಿಲೆಗಳನ್ನು ಗುಣಪಡಿಸಿಕೊಳ್ಳುತ್ತಿದ್ದರು. ಇಲ್ಲೊಂದು ಸ್ಪೆಷಲ್ ಹೋಮ್ ಮೇಡಮ್ ಜ್ಯೂಸ್ ಬಗ್ಗೆ ಹೇಳ್ತೇವೆ.ಅದನ್ನು ಮಾಡಿ ಕುಡಿದರೆ ಮೂತ್ರಕೋಶದ […]
ಶಿರ್ವ ಗ್ರಾಪಂ ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಗೆಲುವು
ಶಿರ್ವ: ಶಿರ್ವ ಗ್ರಾಪಂ 12ನೇ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ ಶೆಣೈ 92 ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಗ್ರಾಪಂ ಅಧ್ಯಕ್ಷರಾಗಿದ್ದ ಗ್ರೆಗೋರಿ ಕೊನ್ರಾಡ್ ಕ್ಯಾಸ್ರಲಿನೋ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಾ. 29ರಂದು ಉಪಚುನಾವಣೆ ನಡೆದಿತ್ತು. ಶ್ರೀನಿವಾಸ ಶೆಣೈ 421 ಮತಗಳನ್ನು ಪಡೆದಿದ್ದರು. ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲ್ಯಾನ್ಸಿ ಕೋರ್ಡಾ ಅವರು 329 ಮತಗಳನ್ನು ಪಡೆದು ಸೋಲು ಕಂಡರು. 10 ಮತಗಳು ತಿರಸ್ಕೃತಗೊಂಡಿವೆ ಎಂದು ತಿಳಿದುಬಂದಿದೆ. ಬಿಜೆಪಿ ಬೆಂಬಲಿತ […]
ಮಧ್ಯಾಹ್ನದ ಬಿಸಿಯೂಟ ಆರಂಭಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮತ್ತೆ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಿ ಎಂದು ಹೇಳಿದೆ. ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಬಿಸಿಯೂಟ ಆರಂಭಿಸುತ್ತಿಲ್ಲ ಎಂಬ ಸರ್ಕಾರ ಉತ್ತರವನ್ನು ಪರಿಶೀಲಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ಹೊರಡಿಸಿತು. ಶಾಲೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ನಿರ್ದೇಶನ ನೀಡಲು ಕೋರಿ ಎಂ. ರಾಧಾ […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ: ಸಚಿವ ಕೋಟ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳಿಗೆ ನಿಷೇಧ ವಿಧಿಸಿ ಹಾಗೂ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವಂತೆ ದ.ಕ. ಜಿಲ್ಲಾಡಳಿತ ಆದೇಶಿಸಿ, 144(3) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾತ್ರೆ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ವಿಷಯದಲ್ಲಿ ಸಾರ್ವಜನಿಕರಲ್ಲಿ ನಾನಾ ರೀತಿಯ ಪ್ರಶ್ನೆ ಹಾಗೂ ಗೊಂದಲ ಮೂಡಿತ್ತು. ಇದಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ […]