ಕೋವಿಡ್ ಎರಡನೇ ಅಲೆ ಹೆಚ್ಚಳ: 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಕೊಂಡಿದ್ದು, 6 ರಿಂದ 9 ನೇ ತರಗತಿ ವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗುವುದು ಎಂದರು. 10ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ
ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್‌ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ‍್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರುಗಳಾದ ವಂ ಕೆನ್ಯೂಟ್ […]
ಕಾರಣಿಕ ತೋರಿಸಿದ ಕೊರಗಜ್ಜ ದೈವ: ದೇಗುಲ ಅಪವಿತ್ರಗೊಳಿಸಿದ ಓರ್ವ ಸಾವು; ಇಬ್ಬರಿಂದ ಕ್ಷಮಾಪಣೆ
ಮಂಗಳೂರು: ಇಲ್ಲಿನ ಎಮ್ಮೆಕೆರೆ ಕೊರಗಜ್ಜನ ಕ್ಷೇತ್ರದ ಕಾರಣಿಕ ಮತ್ತೊಮ್ಮೆ ಸಾಬೀತಾಗಿದೆ. ಕ್ಷೇತ್ರವನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳಿಬ್ಬರು ಪ್ರಾಣಭಯದಿಂದ ತಾವಾಗಿಯೇ ದೇವರ ಸನ್ನಿಧಾನಕ್ಕೆ ಬಂದು ಕ್ಷಮೆಯಾಚಿಸಿ ತಪ್ಪೊಪ್ಪಿಕೊಂಡಿದ್ದಾರೆ. ಕಳೆದ ತಿಂಗಳು ಕೊರಗಜ್ಜನ ಕ್ಷೇತ್ರದಲ್ಲಿ ಕಿಡಿಗೇಡಿಗಳು ಮೂತ್ರ ವಿಸರ್ಜನೆ ಮಾಡಿ ಮಲಿನಗೊಳಿಸಿದ್ದರು. ಇದು ಸಹಸ್ರಾರು ಭಕ್ತಾದಿಗಳಿಗೆ ಬೇಸರವುಂಟು ಮಾಡಿತ್ತು. ಬಳಿಕ ನಡೆದ ದರ್ಶನದಲ್ಲಿ ಕೊರಗಜ್ಜ ಸ್ವಾಮಿ ‘ತಪ್ಪಿಸ್ಥರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡು ಅವರಿಂದಲೇ ತಪ್ಪು ಕಾಣಿಕೆ ಹಾಕಿಸುವಂತೆ ಮಾಡುತ್ತೇನೆಂದು’ ನುಡಿಯನ್ನು ಕೊಟ್ಟಿತ್ತು. ಅದರಂತೆ ಬುಧವಾರ ಕ್ಷೇತ್ರದಲ್ಲಿ ಕೋಲ ನಡೆಯುವ ಸಂದರ್ಭ ರಾತ್ರಿ ಸುಮಾರು […]
ಬ್ರಹ್ಮಾವರ: ಕದ್ರಂಜೆಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾಚೀನ ಶಿವಲಿಂಗ ಪತ್ತೆ
ಬ್ರಹ್ಮಾವರ: ಇಲ್ಲಿನ ಬಿಲ್ಲಾಡಿ ಗ್ರಾಮದ ಕದ್ರಂಜೆಯ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಈ ವೇಳೆ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ ಶೋಧ ನಡೆಸಿದಾಗ ಪ್ರಾಚೀನ ಶಿವಲಿಂಗವೊಂದು ಪತ್ತೆಯಾಗಿದೆ. ಮಹಾಲಿಂಗೇಶ್ವರ ದೇಗುಲ ಕಳೆದ ಹಲವು ದಶಕಗಳ ಹಿಂದೆ ನಿರ್ವಹಣೆ ಇಲ್ಲದೆ ಪಾಳುಬಿದ್ದು ಹೋಗಿದ್ದು, ಇದೀಗ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಮಾರ್ಗದರ್ಶನದಲ್ಲಿ ಊರಿನ ಜನರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಅಲ್ಲದೆ, ಈಗಾಗಲೇ ಅಷ್ಟಮಂಗಲ ಪ್ರಶ್ನೆ ಚಿಂತನೆ ಕಾರ್ಯ ನಡೆದಿದ್ದು, ನವೀಕರಣ ಪ್ರಕ್ರಿಯೆಗಳ ಆರಂಭವಾಗಿದೆ. ಈ ಶುಭಕಾರ್ಯದ ಹೊತ್ತಲ್ಲೇ […]
ಎ. 3ರಂದು ಅಂಬಲಪಾಡಿಯಲ್ಲಿ ಹಿರಿಯರ ನೆನಪು- 2021 ಕಾರ್ಯಕ್ರಮ
ಉಡುಪಿ: ವಿದ್ಯಾವಾಚಸ್ಪತಿ ದಿ. ಬನ್ನಂಜೆ ಗೋವಿಂದಾಚಾರ್ಯರಿಂದ ಸ್ಥಾಪಿತವಾದ ಈಶಾವಾಸ್ಯ ಪ್ರತಿಷ್ಠಾನ ಉಡುಪಿ- ಬೆಂಗಳೂರು ಇದರ ವತಿಯಿಂದ ‘ಹಿರಿಯರ ನೆನಪು-2021’ ಸಂಸ್ಕೃತಿ ಸಂಗಮ ಕಾರ್ಯಕ್ರಮವು ಎ. 3ರ ಶನಿವಾರದಂದು ಸಂಜೆ 5.30ಕ್ಕೆ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್, ಹಿರಿಯ ಚಿಂತಕ ಸಾಹಿತಿ ಅಂಬಾತನಯ ಮುದ್ರಾಡಿ ಭಾಗವಹಿಸುವರು. ಈ ಸಂದರ್ಭದಲ್ಲಿ ಪ್ರಸಿದ್ಧ ವಿದ್ವಾಂಸರಾದ […]