ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಿರಣ್ ಖೇರ್ ಗೆ ಬ್ಲಡ್ ಕ್ಯಾನ್ಸರ್

ಮುಂಬೈ: ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ಪತ್ನಿ ಹಾಗೂ ಚಂಡೀಗಢ ಕ್ಷೇತ್ರದ ಬಿಜೆಪಿ ಸಂಸದೆ ಕಿರಣ್ ಖೇರ್ ಬ್ಲಡ್ ಕ್ಯಾನ್ಸರ್ ಗೆ ತುತ್ತಾಗಿದ್ದಾರೆ. ಇಂದು ನಟ ಅನುಪಮ್ ಖೇರ್ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ತಮ್ಮ ಪತ್ನಿ ಬ್ಲಡ್ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವುದನ್ನು ಹೇಳಿಕೊಂಡಿರುವ ಅವರು, ಆಕೆ ಈ ಯುದ್ಧದ ವಿರುದ್ಧ ಹೋರಾಡಿ ಜಯಶಾಲಿಯಾಗುತ್ತಾಳೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ: ಪೆರಂಪಳ್ಳಿಯ ಯುವಕ ಮೃತ್ಯು

ಉಡುಪಿ: ಬೈಕ್ ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಪೆರಂಪಳ್ಳಿಯ ಯುವಕನೋರ್ವ ಮೃತಪಟ್ಟ ಘಟನೆ ಮಾಸ್ತಿಕಟ್ಟೆ ಯಡೂರು ಸಮೀಪ ಬುಧವಾರ ರಾತ್ರಿ ನಡೆದಿದೆ. ಉಡುಪಿ ಪೆರಂಪಳ್ಳಿ ನಿವಾಸಿ ಜೋಸೆಫ್ ಗೋಮ್ಸ್ (28) ಮೃತ ದುರ್ದೈವಿ.‌ ಇವರು ಸ್ನೇಹಿತನ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ  ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗೋಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತ: ಆದೇಶ ಹಿಂಪಡೆದ ಸರ್ಕಾರ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಕಡಿಮೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆದಿದೆ. ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟನೆ ನೀಡಿದ್ದು, ಸಣ್ಣ ಉಳಿತಾಯ ಯೋಜನೆಗಳ ಮೇಲೆ ಗರಿಷ್ಠ ಶೇ1.1ರವರೆಗೆ ಬಡ್ಡಿ ಇಳಿಕೆ ಮಾಡಲಾಗಿತ್ತು. ಆದರೆ ಈಗ ಅದರಲ್ಲಿ ಬದಲಾವಣೆ ಮಾಡಲಾಗಿದ್ದು, ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2020–21ರ ನಾಲ್ಕನೇ ತ್ರೈಮಾಸಿಕದಲ್ಲಿ, ಅಂದರೆ 2021ರ ಮಾರ್ಚ್‌ ವರೆಗೆ ಇದ್ದ ದರಗಳು ಮುಂದುವರಿಯಲಿವೆ’ […]

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ನವದೆಹಲಿ: ಪ್ರತಿಷ್ಠಿತ 51ನೇ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ನಟ ರಜನಿಕಾಂತ್‌ ಅವರು ಭಾಜನರಾಗಿದ್ದಾರೆ. ನಟ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಪ್ರಕಟಿಸಿದ್ದಾರೆ.