ಅಸ್ಸಾಂ: ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆ; ಮೂವರು ಅಧಿಕಾರಿಗಳ ಅಮಾನತು
ನವದೆಹಲಿ: ಅಸ್ಸಾಂನಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರ ಕಾರಿನಲ್ಲಿ ಇವಿಎಂಗಳನ್ನು ಸಾಗಿಸಿರುವ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಶುಕ್ರವಾರ ನಾಲ್ವರು ಮತಗಟ್ಟೆ ಅಧಿಕಾರಿಗಳನ್ನು ಅಮಾನತು ಮಾಡಿದೆ. ಗುರುವಾರ ಎರಡನೇ ಹಂತದ ಮತದಾನ ಮುಕ್ತಾಯವಾದ ಬಳಿಕ ಮತಗಟ್ಟೆ ಅಧಿಕಾರಿಗಳು ಇವಿಎಂ ಯಂತ್ರಗಳನ್ನು ಅಧಿಕೃತ ವಾಹನದಲ್ಲಿ ಸಾಗಿಸುವಾಗ ಅಡಚಣೆ ಎದುರಾಗಿದೆ. ಅವರ ಕಾರು ಮಾರ್ಗ ಮಧ್ಯೆ ಕೆಟ್ಟು ನಿಂತಿದ್ದರಿಂದ ಅಧಿಕಾರಿಗಳು ಹಿಂದೆ ಬರುತ್ತಿದ್ದ ವಾಹನದ ಸಹಾಯ ಕೋರಿ, ಆ ವಾಹನದಲ್ಲಿ ಸಂಚಾರ ಮುಂದುವರಿಸಿದ್ದರು ಎಂದು ಎನ್ನಲಾಗಿದೆ. ನಿನ್ನೆ ರಾತ್ರಿಯಿಂದ […]
ನಾನು ಯಾವುದಕ್ಕೂ ಬಗ್ಗಲ್ಲ, ಜಗ್ಗಲ್ಲ; ರಾಜೀನಾಮೆಯ ಒತ್ತಾಯಕ್ಕೂ ಹೆದರಲ್ಲ: ಮತ್ತೆ ಸಿಎಂ ವಿರುದ್ಧ ಗುಡುಗಿದ ಈಶ್ವರಪ್ಪ
ಮೈಸೂರು: ನನ್ನ ಇಲಾಖೆಯಲ್ಲಿ ನಡೆಯುತ್ತಿರುವ ಕೆಲಸಗಳು ನನಗೆ ಗೊತ್ತಾಗಬೇಕು. ನಾನು ಪೋಸ್ಟ್ ಮ್ಯಾನ್ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಹೇಳಿದೆ. ಅದಕ್ಕೆ ಅವರು ತಮ್ಮ ಕಡೆಯಿಂದ ತಪ್ಪಾಗಿದೆ ಎಂದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ಸಲ್ಲಿಸಿದದ್ದರು. ಇದರ ಬೆನ್ನಲ್ಲೇ ಕೆಲವು ಸಚಿವರು ಹಾಗೂ ಶಾಸಕರು ಈಶ್ವರಪ್ಪನವರ ವಿರುದ್ಧ ಮುಗಿಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. […]
ರಾಜ್ಯಕ್ಕೆ ಕೋವಿಡ್ ಎರಡನೇ ಅಲೆಯ ಭೀತಿ: ಕಠಿಣ ನಿಯಮದ ಅಸ್ತ್ರ ಪ್ರಯೋಗಿಸಲು ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈಗಾಗಲೇ ಹೊಸ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ 3 ಸಾವಿರ ಕೇಸ್ ಗಳು ದಾಖಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಲು […]
ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಬಡ ಕುಟುಂಬಕ್ಕೆ 17ನೇ ಮನೆ ಹಸ್ತಾಂತರ
ಹೂಡೆ: ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೂರಿಲ್ಲದ ಕುಟುಂಬಗಳಿಗೆ ಮನೆ ಕಟ್ಟಿ ಕೊಡುವ ಯೋಜನೆಯಡಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್, ಹೂಡೆ ಗುರುವಾರ ಹದಿನೇಳನೇ ಮನೆಯನ್ನು ಬಡ ಕುಟುಂಬವೊಂದಕ್ಕೆ ಹಸ್ತಾಂತರಿಸಿದರು. ಮನೆಯ ಕೀಲಿಗೈಯನ್ನು ಫಲನುಭವಿಗೆ ಹಸ್ತಾಂತರಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ರಫೀಕ್, ಇಸ್ಲಾಮಿನ ಆದರ್ಶದಂತೆ ಅನಾಥರಿಗೆ,ದೀನ ದಲಿತರಿಗೆ ಸಹಾಯ ಮಾಡುವುದು ಉಳ್ಳವರ ಕರ್ತವ್ಯವಾಗಿದೆ. ಅದಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಇಡೀ ದೇಶದಾದ್ಯಂತ ಸಮಾಜ ಸೇವಾ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ, ನೆರೆಯ […]
ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ: ಶಾಂತಿಮತೀ ಪ್ರತಿಷ್ಟಾನದ ಅಭಿನಂದನೆ ಸ್ವೀಕರಿಸಿ ಪೂರ್ಣಿಮಾ ಜನಾರ್ದನ್ ಅಭಿಮತ
ಬ್ರಹ್ಮಾವರ: ಎಲ್ಲರಲ್ಲೂ ಒಂದಲ್ಲ ಒಂದು ಸುಪ್ತಪ್ರತಿಭೆ ಅಡಗಿದೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟಲ್ಲಿ ಮಾತ್ರ ಅಂತಹ ಪ್ರತಿಭೆಗಳು ಪ್ರಕಾಶಿಸುತ್ತವೆ ಎಂದು ಪೂರ್ಣಿಮಾ ಜನಾರ್ದನ್ ಹೇಳಿದರು. ಬ್ರಹ್ಮಾವರ ಹಂದಾಡಿ ಶಾಂತಿಮತೀ ಪ್ರತಿಷ್ಟಾನ ಹಮ್ಮಿಕೊಂಡ ಸಾಧಕರೆಡೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶಾಂತಿಮತೀ ಪ್ರತಿಷ್ಟಾನ ವತಿಯಿಂದ ಸಾಧಕರೆಡೆ ನಮ್ಮ ನಡೆ. ನಮ್ಮ ಸಾಧನೆಯ ಬಗ್ಗೆ ನಾವೇ ಅಭಿಮಾನ ಪಟ್ಟರೆ ಸಂತಸವೆನಿಸುತ್ತದೆ. ಆದರೆ ಸಾರ್ಥಕವೆನಿಸುವುದು ಇನ್ನೊಬ್ಬರು ಅಭಿಮಾನ ಪಟ್ಟಾಗ ಮಾತ್ರ ಎಂದರು. ಶಾಂತಿಮತೀ ಪ್ರತಿಷ್ಟಾನದ ವಿದ್ವಾನ್ […]