ಥಿಯೇಟರ್ ಗಳಲ್ಲಿ ಶೇ. 50ರಷ್ಟು ಭರ್ತಿಗೆ ಅವಕಾಶ: ನಟ ಪುನೀತ್ ರಾಜ್ ಕುಮಾರ್ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಿನೆಮಾ ಥಿಯೇಟರ್ ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಸೀಟಿಂಗ್ ವ್ಯವಸ್ಥೆ ಜಾರಿಗೊಳಿಸಿದೆ. ರಾಜ್ಯ ಸರ್ಕಾರ ತೆಗೆದುಕೊಂಡಿರುವ ಈ ದಿಢೀರ್ ಕ್ರಮದಿಂದ ಸ್ಯಾಂಡಲ್ ವುಡ್ ಗೆ ಸಂಕಷ್ಟ ಎದುರಾಗಿದೆ. ಕಳೆದೊಂದು ವರ್ಷದಿಂದ ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿದ್ದ ಚಿತ್ರಲೋಕಕ್ಕೆ ಸರ್ಕಾರದ ತೀರ್ಮಾನ ಬಿಸಿತುಪ್ಪವಾಗಿ […]