ಇಂಡೊನೇಷ್ಯಾದಲ್ಲಿ ಭಾರಿ ಭೂಕುಸಿತ: 126 ಮಂದಿ ಸಾವು

ಇಂಡೊನೇಷ್ಯಾ: ಪೂರ್ವ ಇಂಡೊನೇಷ್ಯಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 126 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಇಂದು ಹೇಳಿದ್ದಾರೆ. ಈ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಇದರಿಂದ ರಕ್ಷಣಾ ಕಾರ್ಯಾಚರಣೆಗೆ ತಡೆಯಾಗಿದೆ. ನಾಪತ್ತೆಯಾದವರ ಹುಡುಕಾಟಕ್ಕೆ ಅಡಚಣೆಉಂಟಾಗಿದೆ ಎಂದು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಇಂಡೊನೇಷ್ಯಾದ ಫ್ಲೋರ್ಸ್‌ ದ್ವೀಪದಿಂದ ಪೂರ್ವ ಟಿಮೋರ್‌ವರೆಗೆ ವ್ಯಾಪಿಸಿರುವ ದ್ವೀಪಗಳಲ್ಲಿ ತೀವ್ರ ಹಾನಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪೂರ್ವ ಫ್ಲೋರ್ಸ್ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇಲ್ಲಿ ಈ ವರೆಗೆ 67 […]

ಕರ್ತವ್ಯದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಸರ್ಕಾರಿ ಸೇವೆಗೆ ಸೇರುವವರು ತಮ್ಮ ಕರ್ತವ್ಯದಲ್ಲಿ ಶ್ರೇಷ್ಠತೆಯನ್ನು ಕಂಡುಕೊಳ್ಳಬೇಕು. ಹೆಚ್ಚಿನವರಲ್ಲಿ ಸೇವೆಗೆ ಸೇರುವ ಮೊದಲು ಇದ್ದ ಮನೋಭಾವ ಸೇವೆಗೆ ಸೇರಿದ ನಂತರ ಬದಲಾಗುತ್ತದೆ. ಆ ರೀತಿ ಮಾಡದೆ ಮೊದಲು ಇದ್ದ ಉತ್ತಮ ಸೇವೆ ನೀಡುವ ಮನೋಭಾವವನ್ನು ಸೇವೆಗೆ ಸೇರಿದ ನಂತರವೂ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಉಡುಪಿ ಪೊಲೀಸ್ ತರಬೇತಿ ಶಾಲೆಯ ವತಿಯಿಂದ ಉಡುಪಿ ಚಂದು ಮೈದಾನದಲ್ಲಿ ಬುಧವಾರ ನಡೆದ 12ನೆ ತಂಡದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ(ಕೆಎಸ್‌ಐಎಸ್‌ಎಫ್)ಯ 95 ಮಂದಿ […]

ಕರ್ತವ್ಯಲೋಪ ಆರೋಪ: ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸಸ್ಪೆಂಡ್

ಉಡುಪಿ: ಕರ್ತವ್ಯಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ, ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿದ್ದರು ಎಂಬ ಆರೋಪವಿದೆ. ಅಲ್ಲದೆ, ಇವರು ಕಚೇರಿಯ ಕರ್ತವ್ಯ ನಿರ್ವಹಣೆ, ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ […]

ಬಡ್ಡಿ ದರ: ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿಐ

ಮುಂಬೈ: ನಿರೀಕ್ಷೆಯಂತೆ ಆರ್‌ಬಿಐ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದೇ, ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಮುಂಬೈಯಲ್ಲಿ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದ ವಿತ್ತೀಯ ನೀತಿ ಪ್ರಕಟಿಸಿದ್ದು, ರೆಪೊ ದರವನ್ನು ಶೇಕಡಾ 4ರಷ್ಟು ಹಾಗೂ ರಿವರ್ಸ್ ರೆಪೊ ದರವನ್ನು ಶೇಕಡಾ 3.35ರಷ್ಟು ಯಥಾಸ್ಥಿತಿ ಕಾಯ್ದುಕೊಂಡಿದೆ. ಆರ್ಥಿಕ ಬೆಳವಣಿಗೆಯ ದರವನ್ನು ಕೂಡ ಬದಲಾಯಿಸದೆ ಶೇಕಡಾ 10.5ರಷ್ಟು ಹಣಕಾಸು ವರ್ಷ 2021-22ರಲ್ಲಿ ಇರಬಹುದು ಎಂದು ಕೂಡ ಅಂದಾಜಿಸಿದೆ. ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಆರ್‌ಬಿಐ ಬಡ್ಡಿದರಗಳನ್ನು ಸಹಜ ಸ್ಥಿತಿಗೆ ಬರುವವರೆಗೆ […]

ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ: ಸಿಎಂ ಯಡಿಯೂರಪ್ಪ

ಬೆಳಗಾವಿ: ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ನೌಕರರು ಹಟ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಟ ಮಾಡುವುದು ಸರಿಯಲ್ಲ ಎಂದರು. ಸಾರಿಗೆ ನೌಕರರ ಬಳಿ ಸಾಕಷ್ಟು ಮನವಿ ಮಾಡಲಾಗಿತ್ತು. ಆದರೂ ಮುಷ್ಕರ ನಡೆಸುತ್ತಿದ್ದು, ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ […]