ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಜೋಡಿಸಿ ಯಶ್‍ಪಾಲ್ ಸುವರ್ಣ

ಉಡುಪಿ: ಭಾರತ ಸರಕಾರದ LIANC ಪ್ರಾದೇಶಿಕ ತರಬೇತಿಕೇಂದ್ರ ಬೆಂಗಳೂರು, ರಾಷ್ಟ್ರೀಯ ಸಹಕಾರಿಅಭಿವೃದ್ದಿ ನಿಗಮ, ಮೀನುಗಾರಿಕಾ ಇಲಾಖೆ, ಮೀನುಗಾರಿಕಾ ಸಚಿವಾಲಯ, ಪಶುಸಂಗೋಪನೆ ಮತ್ತು ಡೈರಿ ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಬಗ್ಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಶಿಬಿರವನ್ನು ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಗುರುವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ […]

ಕೋವಿಡ್ ಹೆಚ್ಚಳ: 10ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್‌ ಆದೇಶ ಪ್ರಕಟಿಸಿದ್ದು, 5ನೇ ತರಗತಿ, 8ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 12ನೇ ತರಗತಿಯ ಪಿಎಸ್‌ಇಬಿ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು […]

ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌

ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದ್ದು, ಇದು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಏಪಿಲ್‌ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಈ ಉತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್‌ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ […]

ಉಡುಪಿ: 40 ಮಂದಿ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಹಯೋಗದಲ್ಲಿ ಪ್ರತಿದಿನ ಮನೆಮನೆಗೆ ಪತ್ರಿಕೆಯನ್ನು ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಗುರುವಾರ ಉಡುಪಿಯ ಪತ್ರಿಕಾ ಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾಂಕೇತಿಕವಾಗಿ ಕಿಟ್‌ಗಳನ್ನು ವಿತರಿಸಿದರು. ಉಡುಪಿ ಜಿಲ್ಲೆಯ ಒಟ್ಟು 40 ಮಂದಿ ಬಡ ಫಲಾನುಭವಿಗಳಿಗೆ ಆಹಾರ ಕಿಟ್‌ನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತರ […]

ಬೇಸಿಗೆಯಲ್ಲಿ ಮುಖದ ಕಾಂತಿಯನ್ನು ಹೆಚ್ಚಿಸಲು ಮನೆಲೇ ಮಾಡಿ ಈ “ಫೇಸ್ ಪ್ಯಾಕ್”

ಚರ್ಮವು ಸ್ವಚ್ಛ, ನಿರ್ಮಲ ಮತ್ತು ಸುಂದರವಾಗಿರಬೇಕಾದರೆ, ನಮ್ಮ ಆಹಾರದಲ್ಲಿ ಪ್ರೋಟೀನ್, ಹಣ್ಣು ಮತ್ತು ತರಕಾರಿಗಳು ಹೇರಳವಾಗಿರಬೇಕು. ಮುಖ್ಯವಾಗಿ ಚಾಕ್ಲೇಟ್ ಮತ್ತು ಕೋಕೋದಿಂದ ತಯಾರಿಸಿದ ಯಾವುದೇ ಆಹಾರ, ಎಣ್ಣೆಯಲ್ಲಿ ಕರಿದ ಮತ್ತು ಅತಿ ಕೊಬ್ಬಿನ ಆಹಾರವನ್ನು ಮಿತವಾಗಿ ಸೇವಿಸಬೇಕು. ಸಮಯಕ್ಕೆ ಸರಿಯಾಗಿ ನಿದ್ದೆ ಹಾಗೂ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಅಂಕಣದಲ್ಲಿ ಸಿಲ್ವಿಯಾ ಕೊಡ್ದೆರೋ  ಕೊಟ್ಟ ಟಿಪ್ಸ್ ಇಲ್ಲಿದೆ ಮುಖದ ಸೌಂದರ್ಯ ವನ್ನು ವೃದ್ಧಿಸಲು “ಫೇಸ್ ಪ್ಯಾಕ್ ” ನಂತಹ ಚಿಕಿತ್ಸೆ ಬೇರಾವುದೇ ಇಲ್ಲ. ಎಪಿಡರ್ಮಿಸ್ […]