ಕರಂದಾಡಿ ಜಯರಾಮ ಶೆಟ್ಟಿ ಕೊಲೆ ಪ್ರಕರಣ; 21 ವರ್ಷದ ಬಳಿಕ ಪ್ರಮುಖ ಆರೋಪಿ ಸೆರೆ
ಕಾಪು: ಕಳೆದ 21 ವರ್ಷಗಳ ಹಿಂದೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದ ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ: 2000ರ ಡಿಸೆಂಬರ್ 4ರಂದು ರಾತ್ರಿ ವೇಳೆ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿ ಆರೋಪಿ ಉದಯ ಶೆಟ್ಟಿ ಯಾನೆ ದಾಡೆ ಉದಯ ಎಂಬವನು ಸುನಿಲ್ ಶೆಟ್ಟಿ, ಇಲಿಯಾಸ್ ಯಾನೆ ಮಹಮ್ಮದ್ ಹಸನ್ ಮತ್ತು […]
ತಮಿಳಿನ ಖ್ಯಾತ ಹಾಸ್ಯನಟ ವಿವೇಕ್‌ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ
ಚೆನ್ನೈ: ತಮಿಳಿನ ಖ್ಯಾತ ಹಾಸ್ಯನಟ ವಿವೇಕ್ ಅವರಿಗೆ ಹೃದಯಾಘಾತವಾಗಿದ್ದು, ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಅವರು ಧಿಡೀರ್ ಆಗಿ ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದರು. ತಕ್ಷಣವೇ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿನ್ನೆಯಷ್ಟೇ ಕೋವಿಡ್ ಲಸಿಕೆ ಪಡೆದಿದ್ದ ವಿವೇಕ್: ವಿವೇಕ್ ಗುರುವಾರ (ಏ.15) ಕೋವಿಡ್ ಲಸಿಕೆ ಪಡೆದಿದ್ದರು. ಬಳಿಕ ಅರ್ಹರಾದ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಸಂದೇಶವನ್ನೂ ನೀಡಿದ್ದರು. […]
ಉಡುಪಿ: ಕಸದಿಂದ ವಿಸ್ಮಯ-ತ್ಯಾಜ್ಯ ವಸ್ತುಗಳ ಸದ್ಬಳಕೆಯ ಮಾದರಿಗಳ ನಿರ್ಮಾಣ ಸ್ಪರ್ಧೆ; ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ: ಜಿಲ್ಲೆಯಲ್ಲಿ 100ಕಿಂತಲೂ ಹೆಚ್ಚು ಗ್ರಾಮ ಪಂಚಾಯತ್ ಗಳಲ್ಲಿ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ನಿರ್ವಹಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ತ್ಯಾಜ್ಯ ಸಂಗ್ರಹಣೆ, ವಿಂಗಡಣೆ ಹಾಗೂ ನಿರ್ವಹಣೆ ಕುರಿತಾಗಿ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ಪಂಚಾಯತ್ ಉಡುಪಿ ಇವರ ನೇತೃತ್ವಲ್ಲಿ ‘ಕಸದಿಂದ ವಿಸ್ಮಯ- ತ್ಯಾಜ್ಯ ವಸ್ತುಗಳ ಸದ್ಬಳಕೆಯ ಮಾದರಿಗಳ ನಿರ್ಮಾಣ ಸ್ಪರ್ಧೆ’ಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಕೇಂದ್ರಗಳಲ್ಲಿ ಪ್ಲಾಸ್ಟಿಕ್ […]
ಭಾನುವಾರ ಪೂರ್ತಿ ಲಾಕ್ ಡೌನ್
ಲಖನೌ: ಕೊರೊನಾ ಕೇಸ್ ಮಿತಿಮೀರಿದ್ದು, ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭಾನುವಾರ ಮಾರುಕಟ್ಟೆಗಳನ್ನು ಮುಚ್ಚಲು ಹೇಳಿದ್ದು “ಸಂಡೇ ಲಾಕ್ ಡೌನ್” ಘೋಷಿಸಿದೆ. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡಿದ್ದರೆ ಮೊದಲ ಬಾರಿ 1,000 ರೂ ಮತ್ತು ಎರಡನೇ ಬಾರಿಗಾದರೆ 10,000 ರೂ. ದಂಡ ವಿಧಿಸುವುದಾಗಿ ಪ್ರಕಟಿಸಿದೆ. ನಿನ್ನೆ ಒಂದೇ ದಿನ ಉತ್ತರಪ್ರದೇಶದಲ್ಲಿ 22,439 ಹೊಸ ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದ್ದು,104 ಸೋಂಕಿತರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. […]
ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಡಿಯೂರಪ್ಪ ಅವರ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ. ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್‌ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.