ಉಡುಪಿ: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಗೆ ಕಪಾಳಮೋಕ್ಷ ಮಾಡಿದ ಕಿಡಿಕೇಡಿ

ಉಡುಪಿ: ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಚಂದ್ರಶೇಖರ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ನಡೆಸಿದ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿ ನಡೆದಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಬಾಗಲಕೋಟೆ ಮೂಲದ ಶಿವಕುಮಾರ್ ಆಸಂಗಿ (21) ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಅವರು ಎ.16ರಂದು ಕರಾವಳಿ ಬೈಸ್ ಬಳಿ ಸಿಬ್ಬಂದಿಯೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದರು. ಸಂಜೆ ಸುಮಾರು 6.15ರ ಸುಮಾರಿಗೆ ಅಲ್ಲಿಗೆ ಬಂದ ಆರೋಪಿ ಶಿವಕುಮಾರ್ ‘ ಏ ಪೊಲೀಸರೇ ನಿಮಗೆ ವಾಹನ ತಪಾಸಣೆ […]

ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಮತಾ ಶೆಟ್ಟಿ ನೇಮಕ

ಉಡುಪಿ: ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತೆಂಕನಿಡಿಯೂರಿನ ಮಮತಾ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅವರು ಸೂಚನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರ ಆದೇಶದ ಅನ್ವಯ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ನೇಮಕಗೊಳಿಸಿ ಆದೇಶ […]

ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಪರಿಹಾರವಲ್ಲ: ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಬೇಡಿ; ತಮ್ಮ ಸರ್ಕಾರದ ವಿರುದ್ಧವೇ ಶಾಸಕ ರಘುಪತಿ ಭಟ್ ಗುಡುಗು

ಉಡುಪಿ: ಉಡುಪಿ ನಗರಕ್ಕೆ ನೈಟ್ ಕರ್ಪ್ಯೂ ವಿನ ಅಗತ್ಯ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಇದು ಪರಿಹಾರ ಕೂಡ ಅಲ್ಲ. ಹೀಗಾಗಿ‌ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಬೇಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ದೇವಸ್ಥಾನ, ದೈವಸ್ಥಾನಗಳು ಹೆಚ್ಚಿರುವ ಜಿಲ್ಲೆಯಾಗಿದೆ. ಹಾಗಾಗಿ ಈ ಸಮಯದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಅದಕ್ಕೆ ತಡೆಯೊಡ್ಡಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಬೇಡಿ […]

ಪೆರಂಪಳ್ಳಿ ಅಂಬಡೆಬೆಟ್ಟುವಿನ ಅಪ್ರಾಪ್ತ ಯುವತಿ ನಾಪತ್ತೆ

ಉಡುಪಿ: ಮೊಬೈಲ್ ವಿಚಾರಕ್ಕೆ ಸಂಬಂಧಿಸಿ ತಾಯಿಯೊಂದಿಗೆ ಜಗಳ ಮಾಡಿಕೊಂಡು ಅಪ್ರಾಪ್ತ ಯುವತಿಯೊಬ್ಬಳು ಮನೆ ಬಿಟ್ಟು ಹೋಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೆರಂಪಳ್ಳಿ ಅಂಬಡೆಬೆಟ್ಟುವಿನ ನಿವಾಸಿ ಅವಿನ(16) ನಾಪತ್ತೆಯಾದ ಯುವತಿ. ಈಕೆ ಮೊಬೈಲ್ ವಿಚಾರಕ್ಕೆ ತಾಯಿಯೊಂದಿಗೆ ಜಗಳ ಮಾಡಿಕೊಂಡು ಏ. 13ರ ರಾತ್ರಿ 10.30ರಿಂದ ಏ. 14ರ ಬೆಳಿಗ್ಗೆ 5.45ರ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾರೆ. ಈಕೆಯ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಮಣಿಪಾಲ ಪೊಲೀಸ್ ಠಾಣೆ ಅಥವಾ ಉಡುಪಿ ಕಂಟ್ರೋಲ್ ರೂಮ್ ಅಥವಾ ಮೊ.ನಂ. […]

ಪಕ್ಷ ವಿರೋಧಿ ಚಟುವಟಿಕೆ: ಮಾಜಿ ಶಾಸಕ ಬಿಜೆಪಿಯಿಂದ ಉಚ್ಚಾಟನೆ

ಬೀದರ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಬಸವಕಲ್ಯಾಣದ ಮಾಜಿ‌ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಪಕ್ಷದಿಂದ ಮುಂದಿನ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರ ವಿರುದ್ಧ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಈ ನಿಟ್ಟಿನಲ್ಲಿ ಖೂಬಾ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಆದೇಶಿಸಿದ್ದಾರೆ.