ಉಡುಪಿ: ಮದುವೆ ಸಹಿತ ವಿವಿಧ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ; ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಮಾರಂಭ ಹಾಗೂ ಆಚರಣೆಗಳ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯವು ಹೆಚ್ಚಾಗಿರುತ್ತದೆ. ಹೀಗಾಗಿ ರಾಜ್ಯ ಸರ್ಕಾರದ ಆದೇಶದಂತೆ ಸೋಂಕು ಹರಡುವ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಜನರ ಒಗ್ಗೂಡುವಿಕೆಗೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಆಚರಣೆಗಳು, ಸಮಾರಂಭಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ […]

ಕೊರೊನಾ ಭಯ ಬೇಡ, ಆದರೆ ಮುಂಜಾಗ್ರತೆ ಅಗತ್ಯ: ಡಾ. ಸುಚೇತಾ ಆರ್ ಪೈ

ಕಾರ್ಕಳ: ಕಾರ್ಕಳ ಶಾರದಾ ಮಹಿಳಾ ಮಂಡಲದ ವತಿಯಿಂದ ಕೋವಿಡ್ 19 ಮುಂಜಾಗ್ರತಾ ಕ್ರಮ ಹಾಗೂ ಲಸಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾರ್ಕಳ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಸುಚೇತಾ ಆರ್. ಪೈ ಮಾತನಾಡಿ, ಆಹಾರ, ವಿಹಾರ, ಯೋಗ, ನಿದ್ರೆ ಮುಂತಾದ ದಿನಚರಿ ಸರಿಯಾದ ಕ್ರಮದಲ್ಲಿ ಇದ್ದಲ್ಲಿ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಕೊವೀಡ್ ಲಸಿಕೆ ಪಡೆದುಕೊಳ್ಳುವಾಗ ನಾಗರಿಕರು ತಮ್ಮ ಆರೋಗ್ಯದ ಪೂರ್ಣ ಮಾಹಿತಿಯನ್ನು  ವೈದ್ಯರೊಂದಿಗೆ ಹಂಚಿಕೊಳ್ಳಬೇಕು ಎಂದು ಸಲಹೆ ನೀಡಿದರು. […]

ನಾಳೆ ಬೆಂಗಳೂರಿಗೆ ಕಠಿಣ ನಿಯಮ ಜಾರಿ: ಸಚಿವ ಆರ್. ಅಶೋಕ್

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಮಿತಿ ಮೀರಿದ್ದು, ಈ ಹಿನ್ನಲೆಯಲ್ಲಿ ನಾಳೆ (ಏ.18) ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ ಮಾಡ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಹಿತಿ ನೀಡಿದ ಅವರು, ಕಳೆದ ವರ್ಷದ ಲಾಕ್ ಡೌನ್ ನಿಂದಲೇ ತುಂಬಾ ಸಮಸ್ಯೆ ಆಗಿದೆ. ಹಾಗಾಗಿ ಲಾಕ್ ಡೌನ್ ಹೊರತು ಪಡಿಸಿ ಬಿಗಿ ಕ್ರಮ ಜಾರಿ ಮಾಡಲಾಗುತ್ತದೆ. ಬೆಂಗಳೂರಿಗೆ ಲಾಕ್ ಡೌನ್ ಅವಶ್ಯಕತೆ ಇಲ್ಲ, ಸರ್ಕಾರದ ‌ಮುಂದೆಯೂ ಲಾಕ್ ಡೌನ್ ಪ್ರಸ್ತಾವ ಇಲ್ಲ ಎಂದರು. […]

ತುಳು ಚಿತ್ರರಂಗದ ಯುವ ನಿರ್ದೇಶಕ ಹೃದಯಾಘಾತದಿಂದ ನಿಧನ

ಮಂಗಳೂರು: ತುಳು ಚಿತ್ರರಂಗದ ಯುವ ನಿರ್ದೇಶಕ ರಘು ಶೆಟ್ಟಿ (39) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು. ಮೂಡುಬಿದಿರೆಯ ರಘು ಶೆಟ್ಟಿ ಶನಿವಾರ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಘು ಶೆಟ್ಟಿ ಅವರು ‘ಅರ್ಜುನ್ ವೆಡ್ಸ್ ಅಮೃತ’ ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದರು.