ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆ ಮುಂದೂಡಿಕೆ

ಮಂಗಳೂರು: ರಾಜ್ಯ ಸರಕಾರ ಕೋವಿಡ್ ಕಾರಣದಿಂದ ವಿಧಿಸಿರುವ ನಿಯಮಗಳಿಗನುಸಾರವಾಗಿ  ನಾಳೆ ಎ.21 ರಿಂದ ನಡೆಯಲಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ರದ್ದು ಮಾಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ. ನಾಳೆಯಿಂದ ನಡೆಯಲಿರುವ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗಧಿಪಡಿಸಲಾಗುವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರೆ.  

ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿ: ಶಾಲಾ -ಕಾಲೇಜು ಬಂದ್, ಬಾರ್-ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ

ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು, ರಾಜ್ಯಾದ್ಯಾಂತ ನಾಳೆಯಿಂದ (ಏ. 21) ಮೇ 4ರ ವರೆಗೆ ಹೊಸ ಮಾರ್ಗಸೂಚಿ ಜಾರಿಯಲ್ಲಿ ಇರಲಿದೆ. ಅದರ ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರ ವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಶನಿವಾರ ಭಾನುವಾರ ದಿನಸಿ, ತರಕಾರಿ, ಹಾಲು ಅಂಗಡಿಗಳು 6ರಿಂದ 10ರವರೆಗೆ ಮಾತ್ರ ಓಪನ್ ಇರಲಿದೆ.   ನೈಟ್ ಕರ್ಪ್ಯೂ ಅವಧಿ ಹೆಚ್ಚಳ: […]

ಲಾಕ್ ಡೌನ್ ಅಸ್ತ್ರವನ್ನು ಅಂತಿಮವಾಗಿ ಬಳಸಿ; ಎಲ್ಲ ರಾಜ್ಯಗಳಿಗೆ ಕರೆಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಸದ್ಯದ ಪರಿಸ್ಥಿತಿಯಲ್ಲಿ ದೇಶವನ್ನು ಲಾಕ್ ಡೌನ್ ನಿಂದ ರಕ್ಷಿಸಬೇಕಾಗಿದೆ. ಲಾಕ್ ಡೌನ್ ಅಸ್ತ್ರವನ್ನು ಅಂತಿಮವಾಗಿ ಮಾತ್ರ ಬಳಸಬೇಕು. ನಾನು ಈ ಬಗ್ಗೆ ಎಲ್ಲ ರಾಜ್ಯಗಳಿಗೂ ಮನವಿ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯಗಳು ಲಾಕ್ ಡೌನ್ ಅಸ್ತ್ರವನ್ನು ಅಂತಿಮವಾಗಿ ಬಳಸಬೇಕು. ಮೈಕ್ರೋ ಕಂಟೋನ್ಮೆಂಟ್ ಝೋನ್ ಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಸದ್ಯದ ಪರಿಸ್ಥಿತಿಯನ್ನು ಬದಲಾಯಿಸಲು ಜನರು ಹೋರಾಡಬೇಕು. ಅನಗತ್ಯವಾಗಿ ಜನರು ಮನೆ ಬಿಟ್ಟು ಹೊರಬರಬೇಡಿ. ಲಾಕ್ ಡೌನ್ […]

ಕೆಲವೇ ಕ್ಷಣಗಳಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗೊಂಡಿದ್ದು, ಈಗಾಗಲೇ ಕೆಲವು ರಾಜ್ಯಗಳು ಲಾಕ್ ಡೌನ್ ಘೋಷಿಸಿವೆ. ಈ ನಡುವೇ ದೇಶಾದ್ಯಂತ ಲಾಕ್ ಡೌನ್ ಹೇರಬೇಕೆಂಬ ಅಭಿಪ್ರಾಯವೂ ಬಲವಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 8.45ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಇದು ಬಹಳಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಕ್ಕೆ ಮುಹೂರ್ತ ಫಿಕ್ಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಾದ ಪ್ರತಿವಾದ ಇಂದಿಗೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸಲಿದೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ: 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಆತನ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ […]