ಅಕ್ರಮ ಗೋ ಕಳ್ಳತನದ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಒತ್ತಾಯ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋಸಾಗಾಟ ಹಾಗೂ ಅಕ್ರಮ ಗೋ ಕಳ್ಳತನಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದೂ ಜಾಗರಣ ವೇದಿಕೆ ವತಿಯಿಂದ ಕಾರ್ಕಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು. ಕುಕ್ಕುಂದೂರು, ಈದು, ಬಜಗೋಳಿ, ಹೊಸ್ಮಾರು, ಬೆಳ್ಮಣ್, ನಿಟ್ಟೆ, ಬೈಲೂರು ಪ್ರದೇಶಗಳಲ್ಲಿ ನಿರಂತರವಾಗಿ ಗೋ ಕಳ್ಳತನವಾಗುತ್ತಿದೆ. ಗೋ ಕಳ್ಳರು ಯಾವುದೇ ಕಾನೂನಿನ ಹೆದರಿಕೆ ಇಲ್ಲದೆ ಗೋಕಳ್ಳತನದಲ್ಲಿ ತೊಡಗಿದ್ದಾರೆ. ಇವರ ವಿರುದ್ಧ ಯಾವುದೇ ಕ್ರಮ ಆಗುತ್ತಿಲ್ಲ. ಇದು ಸಮಾಜದ ಶಾಂತಿಗೆ ಭಂಗವಾಗಿದ್ದು, ಗೋಕಳ್ಳರ […]
ಕಾರ್ಕಳ: ಐದು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಕಾರ್ಕಳ: ಐದು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಇಂದಿರಾ ನಗರದ ನಿವಾಸಿ ಸಂಧ್ಯಾ (36) ಹಾಗೂ ಅವರ ಪುತ್ರಿ ಧ್ರುವಿ (5) ಎಂದು ಗುರುತಿಸಲಾಗಿದೆ. ಇವರು ಎ. 16ರಂದು ಹೊಸ್ಮಾರ್ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಸ್ಸು ಬರಲಿಲ್ಲ. ಈ ಬಗ್ಗೆ ಪತಿ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಉಡುಪಿ ನಗರದಲ್ಲಿ ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದಿದ್ದು, ಮಧ್ಯಾಹ್ನ 3 ಗಂಟೆಗೆ ವೇಳೆಗೆ ಗುಡುಗು ಸಹಿತ ಮಳೆ ಸುರಿದಿದೆ. ಉಡುಪಿ, ಕಟಪಾಡಿ, ಕಾಪು, ಪಡುಬಿದ್ರಿ, ಕುಂದಾಪುರದ ಮಡಾಮಕ್ಕಿ, ಆರ್ಡಿ, ಶೇಡಿಮನೆ, ಅಲ್ವಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕಾರ್ಕಳ, ಹಿರಿಯಡಕ, ಪೆರ್ಡೂರು, ಹೆಬ್ರಿಯ ಹಲವಡೆ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಗಾಳಿಯ ಹೊಡೆತಕ್ಕೆ ಮರಗಳು ಧರೆಗುರುಳಿದೆ. ಧಿಡೀರ್ ಸುರಿದ […]
1ರಿಂದ 9ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್: ಮೇ 1ರಿಂದ ಬೇಸಿಗೆ ರಜೆ, ಜೂ. 15ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ, ಹಿಂದಿನ ಶೈಕ್ಷಣಿಕ ದಾಖಲೆಗಳ ಆಧಾರದಲ್ಲಿ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ. ಅಲ್ಲದೆ, ನಿಗದಿಯಂತೆ ಜೂನ್ 21ರಿಂದ ಜುಲೈ 5ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ. ಮುಂದಿನ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ಒಂದರಿಂದ ಏಳನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ […]
1ರಿಂದ 9ನೇ ತರಗತಿಗಳಿಗೆ ಪರೀಕ್ಷೆ ಇಲ್ಲ, ಮೌಲ್ಯಾಂಕನ ಮೂಲಕ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 1ನೇ ತರಗತಿಯಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. 1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು/ ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ […]