ವೀಕೆಂಡ್ ಕರ್ಪ್ಯೂ ಸಮಯದಲ್ಲಿ‌ ಮದುವೆಯಾಗುವುದಾದರೆ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು

ಮಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮದುವೆ ಹೊರಡಿಸಲಾಗಿರುವ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಗೈಡ್ ಲೈನ್ಸ್ ವಿವರ: * ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. * ಇದಕ್ಕಾಗಿ ಮದುವೆ ಮನೆಯವರು 50 ಜನರ ಪಟ್ಟಿ ತಯಾರಿಸಬೇಕು. […]

ಶಿರ್ವ ಗ್ರಾಪಂ: ಕಾಂಗ್ರೆಸ್ ಗೆ ಒಲಿದ ಅಧ್ಯಕ್ಷ ಸ್ಥಾನ

ಶಿರ್ವ: ಅನಿರೀಕ್ಷಿತ ಬೆಳವಣಿಗೆಯಲ್ಲಿ ಶಿರ್ವ ಗ್ರಾಪಂ ಚುನಾವಣೆಯ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಒಲಿದಿದ್ದು, ಕಾಂಗ್ರೆಸ್ ಬೆಂಬಲಿತ ಸದಸ್ಯ ಕೆ.ಆರ್. ಪಾಟ್ಕರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ ಅವರ ನಿಧನದಿಂದ ಗ್ರಾಪಂ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಗೆದ್ದು ಬಂದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ. ಆರ್ ಪಾಟ್ಕರ್ ಮತ್ತು ಬಿಜೆಪಿ ಬೆಂಬಲಿತ ಪ್ರವೀಣ್ […]

ಕರಾವಳಿಯಾದ್ಯಂತ ನಾಳೆ (ಏ.22) ಮಳೆಯಾಗುವ ಸಾಧ್ಯತೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಏ.21) ಮತ್ತು ಏ. 22ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪುತ್ತೂರು, ವಿಟ್ಲ ಹಾಗೂ ಉಡುಪಿಯ ಸುತ್ತಮುತ್ತಲ ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಜಿಲ್ಲೆಗಳಲ್ಲಿ […]