ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಣ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಇನ್ನಷ್ಟು ಬಿಗಿ ಕ್ರಮಕೈಗೊಂಡಿದ್ದು, ಇಂದು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಮೇ 4ರವರೆಗೆ ಬಂದ್ ಆಗಲಿದೆ. ಯಾವುದೆಲ್ಲ ಬಂದ್?: ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ. ಯಾವುದೆಲ್ಲ ಒಪನ್? ಹೋಟೆಲ್ , […]

ಉಡುಪಿ: ಮೇ 4ರವರೆಗೆ ದೇವಸ್ಥಾನ, ಚರ್ಚ್, ಮಸೀದಿ ಬಂದ್

ಉಡುಪಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಮೇ4 ರವರೆಗೆ ಕೊರೊನಾ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿ ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ‌ ಜಿ.ಜಗದೀಶ್ ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಮಸೀದಿ, ದೇವಸ್ಥಾನ, ಚಚ್೯ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಸಾರ್ವಜನಿಕರಿಗೆ ಮುಂದಿನ ಆದೇಶವರೆಗೆ ಮುಚ್ಚಬೇಕು ಎಂದು ಸೂಚಿಸಿದ್ದಾರೆ. ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗಳು ಯಾವುದೇ  ಸಂದರ್ಶಕರನ್ನು ಒಳಗೊಳ್ಳದೆ ತಮ್ಮ ಆಚರಣೆ ಗಳನ್ನು ಮತ್ತು ಕರ್ತವ್ಯಗಳನ್ನು […]

ಹೊಸ ಗೈಡ್​​ಲೈನ್ಸ್​ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ: ಯಾವುದಕ್ಕೆಲ್ಲ ಅನುಮತಿ? ಯಾವುದಕ್ಕಿಲ್ಲ.?

ಬೆಂಗಳೂರು: ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ಮೇ 4ರವರೆಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ಹಾಗೂ ಶನಿವಾರ ಭಾನುವಾರಗಳಂದು ಇಡೀ ದಿನ ಕರ್ಫ್ಯೂ ಜಾರಿ ಮಾಡಲಾಗಿದೆ. ಅಗತ್ಯ ಸೇವೆ ಒದಗಿಸುವ ಕೆಲವು ಅಂಗಡಿ/ಸಂಸ್ಥೆಗಳಿಗೆ ಮಾತ್ರ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. ಆದ್ರೆ ಯಾವ ಅಂಗಡಿಗಳು ಓಪನ್ ಇರಲು ಅವಕಾಶ, ಯಾವುದೆಲ್ಲಾ ಬಂದ್ ಆಗಿರಬೇಕು ಎಂಬ ಬಗ್ಗೆ ಗೊಂದಲ ಮೂಡಿದ ಹಿನ್ನೆಲೆ ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಈ ಸಂಬಂಧ ಹೊಸ ಗೈಡ್​​ಲೈನ್ಸ್​ […]

ಹೆಬ್ರಿ: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

ಹೆಬ್ರಿ: ಸ್ನಾನ ಮಾಡಲು ಹೊಳೆಗಿಳಿದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿಯ ಜರ್ವತ್ತು ಹೊಳೆಯಲ್ಲಿ ನಡೆದಿದೆ. ಹೆಬ್ರಿಯ ಬೊಳಂಗಲ್ಲು ನಿವಾಸಿ ಸುಬ್ಬಣ್ಣ ನಾಯಕ್‌ ಅವರ ಪುತ್ರ ಕೃಷ್ಣಮೂರ್ತಿ ನಾಯಕ್ (30) ಮೃತ ಯುವಕ. ಈತ ಅವಿವಾಹಿತನಾಗಿದ್ದು, ಉಡುಪಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಕೃಷ್ಣಮೂರ್ತಿ ಎ. 21ರಂದು ಸ್ನಾನ ಮಾಡುವ ಸಲುವಾಗಿ ಮನೆಯ ಸಮೀಪದ ಹೊಳೆಗೆ ತೆರಳಿದ್ದನು. ಎಷ್ಟೊತ್ತಾದರೂ ಕೃಷ್ಣಮೂರ್ತಿ ಮನೆಗೆ ಬಾರದಿದ್ದಾಗ ಮನೆಯವರು ಹೊಳೆಯ ಬಳಿಗೆ ಹೋಗಿ ಹುಡುಕಾಟ ನಡೆಸಿದ್ದಾರೆ. ಆಗ […]

ಮಟ್ಟು ದೇವಳದಲ್ಲಿ ನವದಿನಗಳ ಸಂಭ್ರಮದ ಶ್ರೀರಾಮಸತ್ರ

ಕಟಪಾಡಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಮಹಾಸಂಕಲ್ಪ ಅಭಿಯಾನ ಹಾಗೂ ಲೋಕ ಕಲ್ಯಾಣಾರ್ಥವಾಗಿ ಪಲಿಮಾರು ಮಠದ ಪಟ್ಟದದೇವರಾದ ಹನುಸ್ಸೇವಿತ ಸೀತಾ ಲಕ್ಷ್ಮಣ ಸಹಿತ ಶ್ರೀರಾಮಚಂದ್ರ ದೇವರಿಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ಶ್ರೀಪಾದರು ಹಾಗೂ ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ‘ಶ್ರೀರಾಮ ಸತ್ರ’ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ನೆರವೇರಿತು. ಈ ಪರ್ವಕಾಲದಲ್ಲಿ ಶ್ರೀರಾಮ ತಾರಕ ಮಂತ್ರದ ಜಪ ಸಹಿತ ಹೋಮದೊಂದಿಗೆ, ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸತತ ಹತ್ತು ದಿನಗಳ ಕಾಲವೂ, […]