ಮೂಡುಬಿದಿರೆ: ಗೂಡ್ಸ್ ಲಾರಿ- ಬೈಕ್ ಡಿಕ್ಕಿ; ಮಾಜಿ ತಾಪಂ ಸದಸ್ಯೆಯ ಪುತ್ರ ಮೃತ್ಯು

ಮೂಡುಬಿದಿರೆ: ಗೂಡ್ಸ್ ಲಾರಿ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಜಿರೆಯ ನೇಕಾರ ಪೇಟೆಯ ನಿವಾಸಿ ಲಾಯಿಲ ತಾಪಂ ಮಾಜಿ ಸದಸ್ಯೆ ಶೋಭಾ ಶೆಟ್ಟಿ ಅವರ ದ್ವೀತಿಯ ಪುತ್ರ ಭವಿತ್ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಇವರು ಅಮೆಜಾನ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು, ಪಾರ್ಸೆಲ್ ಡೆಲಿವರಿ ಕೊಟ್ಟು ವಾಪಾಸ್ಸಾಗುತ್ತಿದ್ದ ವೇಳೆ ಈ‌ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಭವಿತ್ […]

ಕಾರ್ಕಳ: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಕಾಡಿನ ಮಧ್ಯೆ ವ್ಯಕ್ತಿಯೊಬ್ಬರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ (50) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಮಕ್ಕಳೇ ಕ್ಷಮಿಸಿ ಎಂದು ಬರೆಯಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಂತ್ಯ ಕರ್ಫ್ಯೂ; ಅಸಹಾಯಕರಿಗೆ ಊಟ ವಿತರಣೆ

ಉಡುಪಿ: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಊಟ ಸಿಗದೆ ಹಸಿವಿನಿಂದ ಬಳಲುತ್ತಿದ್ದ ತೀರಾ ಅಸಹಾಯಕರಿಗೆ, ಅನಾರೋಗ್ಯ ಪೀಡಿತರಿಗೆ, ವೃದ್ದರು ಅಂಗವಿಕಲರು ಹಾಗೂ ಮಾನಸಿಕ ಅಸ್ವಸ್ಥರಿಗೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು 100 ಊಟವನ್ನು ವಿತರಿಸಿ ಹಸಿದವರ ಹಸಿವು ನೀಗಿಸಿದರು. ಆದಿಉಡುಪಿ, ಪಂದುಬೆಟ್ಟು, ಕರಾವಳಿ ಬೈಪಾಸ್, ಶಿರಿಬೀಡು, ರಥಬೀದಿ, ರಾಜಾಂಗಣ ವಾಹನ ನಿಲುಗಡೆ ಸ್ಥಳ, ಕಿನ್ನಿಮುಲ್ಕಿ, ಬಲಾಯಿಪಾದೆ, ರೈಲ್ವೆ ನಿಲ್ದಾಣ ಹಾಗೂ ನಗರದ ಮುಖ್ಯ ನಾಲ್ಕು ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದಿದ್ದ ಅಸಹಾಯಕರಿಗೆ ವಿಶು ಶೆಟ್ಟಿ ಆಹಾರ ವಿತರಣೆ […]

ಕಾರ್ಕಳ: ಶಾಂಭವಿ ನದಿಯಲ್ಲಿ ಎಗ್ಗಿಲ್ಲದೇ ನಡಿತಿದೆ ಅಕ್ರಮ ಮರಳು ದಂಧೆ:ಪ್ರಭಾವಿ ವ್ಯಕ್ತಿಗಳು ಶಾಮೀಲು?

ಕಾರ್ಕಳ: ಎಲ್ಲೆಡೆ ಕೊರೋನಾ ಹಾಹಾಕಾರ ಜಾಸ್ತಿಯಾಗಿದೆ.ವೀಕೆಂಡ್ ಲಾಕ್ ಡೌನ್ ನಿಂದ ಚಟುವಟಿಕೆಗಳೆಲ್ಲಾ ಸ್ತಬ್ಧವಾಗಿದೆ. ಈ ದುರಿತ ಕಾಲದಲ್ಲೇ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಶಾಂಭವಿ ನದಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ.ಇವೆಲ್ಲಾ ಕಣ್ಣಿಗೆ ಕಾಣುತ್ತಿದ್ದರೂ  ಇಲಾಖಾಧಿಕಾರಿಗಳು ಬಾಯಿಗೆ ಬೀಗ ಜಡಿದು ಕೂತ ಹಾಗಿದೆ. ಸಂಕಲಕರಿಯದ ಉಗ್ಗೆದಬೆಟ್ಟುವಿನ ನದಿ ದಡದಲ್ಲಿ ಮತ್ತು ಮುಂಡ್ಕೂರು ಉಳೆಪಾಡಿಯ ಕಿಂಡಿ ಅಣೆಕಟ್ಟುವಿನ ಬದಿಯಲ್ಲಿ ಮಾತ್ರ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಯಾವುದೇ ಇಲಾಖೆಯು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ದುರಂತ. ಪ್ರಭಾವಿ […]

ಅದು ಮನೆಯ ಕಾರ್ಯಕ್ರಮ, ಅದ್ಕೆ ಮಾಸ್ಕ್ ಹಾಕಿಲ್ಲ: ಡಿಸಿ ಜಗದೀಶ್

ಉಡುಪಿ: ಉಡುಪಿ ಜಿಲ್ಲಾ ಎಎಸ್ಪಿಯ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಸ್ಕ್ ಧರಿಸದೆ ಭಾಗವಹಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದು, ಇದು ನನ್ನ ಮನೆಯ ಪಕ್ಕದಲ್ಲಿರುವ ಹೆಚ್ಚುವರಿ ಎಸ್ಪಿ ಮನೆಯಲ್ಲಿ ನಡೆದ ಅವರ ಮಗಳ ಮೆಹಂದಿ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕ್ಲೋಸ್ ಫ್ಯಾಮಿಲಿಯ ಕೆಲವೇ ಕೆಲವು ಮಂದಿ ಸೇರಿದ್ದರು. ಅದು […]