ಕೊರೊನಾ ಸೋಂಕಿತರಿಗೆ ಅವಶ್ಯವಿರುವ ವೆಂಟಿಲೇಟರ್, ಲಸಿಕೆ ಖರೀದಿಗೆ ಆದ್ಯತೆ ಕೊಡಿ: ರಾಕೇಶ್ ಬಿರ್ತಿ

ಉಡುಪಿ: ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಸಿಗದೆ ಸೋಂಕಿತರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಜನ್ ನ, ವೆಂಟಿಲೇಟರ್ ಗಳ ಸಮರ್ಪಕ ಪೂರೈಕೆಗೆ ಒತ್ತು ನೀಡುವುದರ ಜತೆಗೆ ಲಸಿಕೆ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಆಗ್ರಹಿಸಿದ್ದಾರೆ. ಪ್ರಧಾನಿ ಅವರು ಸೋಂಕಿತರಿಗೆ ಅವಶ್ಯವಿರುವ ರೆಮ್ಡೆಸಿವಿಯರ್, ವೆಂಟಿಲೇಟರ್ ನ ತುರ್ತು ಖರೀದಿಗೆ […]
ಏ.28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ

ಉಡುಪಿ: ಇದೇ ಏಪ್ರಿಲ್ 28 ರಿಂದ ಮೇ 18 ರ ವರೆಗೆ 2021ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು. ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಕೆ […]
ವೀಕೆಂಡ್ ಕರ್ಪ್ಯೂಗೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಬೆಂಬಲ

ಉಡುಪಿ: ಕೋವಿಡ್-19 ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಉಡುಪಿ, ಕುಂದಾಪುರ, ಕಾರ್ಕಳ ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಪೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರಬಂದಿಲ್ಲ. ಕುಂದಾಪುರ […]
ಮಾಸ್ಕ್ ಧರಿಸದೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿ: ಸಾರ್ವಜನಿಕರಿಂದ ಭಾರೀ ಆಕ್ರೋಶ

ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿವೆ. ಈ ಮಧ್ಯೆ ಸ್ವತಃ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೇ ಶುಕ್ರವಾರ ರಾತ್ರಿ 8. 45ರ ಸುಮಾರಿಗೆ ಎಎಸ್ಪಿ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಡಿಸಿಯವರು ಮಾಸ್ಕ್ ಧರಿಸದೆ ಫೋಟೋಗೆ ಪೋಸ್ ಕೊಟ್ಟಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಮಾರ್ಗಸೂಚಿಯಲ್ಲಿ ಮದುವೆಗಳಿಗೆ 50 ಜನ […]