ನಾಪತ್ತೆಯಾಗಿದ್ದ ಪ್ರಸಿದ್ಧ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ
ಉಡುಪಿ: ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಪೆರ್ಡೂರು ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಅವರು ಇದೀಗ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ಮನೆಗೆ ಬಾರದೆ ಕಾಣೆಯಾಗಿದ್ದರು. ಇದರಿಂದ ಭಯಗೊಂಡ ಕಡಬಾಳರ ಪತ್ನಿ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರಿಗೆ ಉದಯ […]
ವಿಜಯ್ ಸಂಕೇಶ್ವರ್ ಹೇಳಿಕೆ ಬೆನ್ನಲ್ಲೇ ಮೂಗಿಗೆ ನಿಂಬೆ ರಸ ಹಾಕಿಕೊಂಡು ಒದ್ದಾಡಿ ಮೃತಪಟ್ಟ ಶಿಕ್ಷಕ
ಸಿಂಧನೂರು: ಮೂಗಿಗೆ ನಾಲ್ಕು ಹನಿ ಲಿಂಬೆ ರಸ ಹಾಕಿದರೆ ಆಕ್ಸಿಜನ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಎಂದು ಈಚೆಗೆ ಉದ್ಯಮಿ ವಿಜಯ್ ಸಂಕೇಶ್ವರ್ ಹೇಳಿದ್ದರು. ಈ ಹೇಳಿಕೆಯ ಬಳಿಕ ಹಲವರು ಲಿಂಬೆ ರಸದ ಪ್ರಯೋಗವನ್ನು ಮಾಡಿದ್ದರು. ಅದೇ ರೀತಿ ಸಿಂಧನೂರಿನ ಶಿಕ್ಷಕರೊಬ್ಬರು ಬುಧವಾರ ಪ್ರಯೋಗ ಮಾಡಿದ್ದು, ಅವರು ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಕೊಂಡ ತಕ್ಷಣವೇ ವಿಲವಿಲ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಿಂಧನೂರು ಶರಣಬಸವೇಶ್ವರ ಕಾಲೊನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ (43) ಮೃತದುರ್ದೈವಿ. […]
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಶ್ವವಾಣಿ ಪತ್ರಿಕೆಯ ಮಂಗಳೂರು ವಿಭಾಗ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಪತ್ರಿಕಾ ಭವನದಲ್ಲಿ ಎ. 27ರಂದು ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಕುಂದೇಶ್ವರ ದೇವಸ್ಥಾನದ ಆನುವಂಶಿಕ ಅರ್ಚಕರು ಹಾಗೂ ಧರ್ಮದರ್ಶಿಯೂ ಆಗಿರುವ ಜಿತೇಂದ್ರ ಕುಂದೇಶ್ವರ ಕಾರ್ಕಳ ಪತ್ರಕರ್ತರ ಸಂಘದ ಮಾಜಿ […]
ಕೋವಿಡ್ ಕರ್ಪ್ಯೂ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಎಲ್ಲಾ ಹೊರರೋಗಿ ಸೇವೆಗಳು ಮಧ್ಯಾಹ್ನದವರಗೆ ಮಾತ್ರ ಲಭ್ಯ
ಮಣಿಪಾಲ: ರಾಜ್ಯಾದ್ಯಂತ ಕೋವಿಡ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಮತ್ತು ಸಾರ್ವಜನಿಕ ಸಾರಿಗೆಯ ಲಭ್ಯತೆಯ ಕೊರತೆಯ ಕಾರಣದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಾಳೆ (ಏ.29)ಯಿಂದ ಜಾರಿಗೆ ಬರುವಂತೆ ಎಲ್ಲಾ ಹೊರರೋಗಿ ಸೇವೆಗಳು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರ ವರೆಗೆ ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿವೆ. ಈ ಬದಲಾವಣೆಯು ಸರ್ಕಾರದ ಜನತಾ ಕರ್ಫ್ಯೂ ಆದೇಶ ಇರುವವರೆಗೆ ಮುಂದುವರಿಯುತ್ತದೆ. ಆದಾಗ್ಯೂ ತುರ್ತು ಸೇವೆಗಳು ಎಂದಿನಂತೆ ಎಲ್ಲಾ ದಿನಗಳಲ್ಲಿ 24*7 ಲಭ್ಯವಿರುತ್ತವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಪೆರ್ಡೂರು ಮೇಳದ ಯಕ್ಷಗಾನ ಕಲಾವಿದ ನಾಪತ್ತೆ
ಉಡುಪಿ: ಬಡಗುತಿಟ್ಟನ ಪ್ರಸಿದ್ಧ ಯಕ್ಷಗಾನ ಕಲಾವಿದ ನಾಪತ್ತೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ಯಾಡಿ ಗುಡ್ಡೆಯಂಗಡಿ ನಿವಾಸಿ ಕಡಬಾಳ ಉದಯ ಹೆಗಡೆ (37) ನಾಪತ್ತೆಯಾದ ಕಲಾವಿದ. ಇವರು ಏಪ್ರಿಲ್ 21ರಿಂದ ಕಾಣೆಯಾಗಿದ್ದಾರೆ. ಇವರು ಪೆರ್ಡೂರು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಏಪ್ರಿಲ್ 21ರಂದು ಮನೆಯಿಂದ ಕಾರಿನಲ್ಲಿ ಹೋಗಿದ್ದರು. ಆದರೆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ ಆತಂಕಗೊಂಡಿರುವ ಉದಯ ಹೆಗಡೆ ಪತ್ನಿ ಅಶ್ವಿನಿ ಕೊಂಡದಕುಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು […]