ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಯಶ್ಪಾಲ್ ಸುವರ್ಣ ಅವರಿಗೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬುಧವಾರ ಪಕ್ಷದ ಶಾಲು ಹೊದಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ […]
ಅಕ್ಕಿ ಕೇಳಿದ್ದಕ್ಕೆ ಸಾಯೋದು ಒಳ್ಳೆಯದು ಎಂದ ಸಚಿವ ಉಮೇಶ್ ಕತ್ತಿ.!
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಈ ಮಧ್ಯೆ ಆಹಾರ ಸಚಿವ ಉಮೇಶ್ ಕತ್ತಿ ನಾಲಿಗೆ ಹರಿಬಿಡುವ ಮೂಲಕ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಪಡಿತರ ಅಕ್ಕಿ ಕಡಿತಗೊಳಿಸಿರುವುದಕ್ಕೆ ಸಂಬಂಧಿಸಿ ರೈತ ಸಂಘ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ಕಾರ್ಯಕರ್ತ ಈಶ್ವರ ಆರ್ಯರ ಅವರು ಸಚಿವ ಕತ್ತಿಗೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಇದಕ್ಕೆ ಸಚಿವರು, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ. ಮುಂದಿನ ತಿಂಗಳಿನಿಂದ ಅಕ್ಕಿ […]
ಕೊರೊನಾ ರೋಗಿಯನ್ನು ಕೊಲೆಗೈದಿದ್ದಾರೆಂಬ ವಿಡಿಯೋ ವೈರಲ್: ಈ ವಿಡಿಯೋದ ಅಸಲಿಯತ್ತೇನು.?
ಬೆಂಗಳೂರು: ಕೊರೊನಾ ಸೋಂಕಿನ ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಈ ನಡುವೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳನ್ನು ಹರಿಬಿಟ್ಟು ಜನರನ್ನು ಇನ್ನಷ್ಟು ಆತಂಕಕ್ಕೆ ದೂಡುತ್ತಿರುವ ಸಂಗತಿಗಳು ಬೆಳಕಿಗೆ ಬಂದಿದೆ. ಆಸ್ಪತ್ರೆಯೊಂದರಲ್ಲಿ ದುಡ್ಡಿಗಾಗಿ ರೋಗಿಯ ಕತ್ತುಹಿಸುಕು ಸಾಯಿಸಿದ್ದಾರೆ ಎನ್ನಲಾದ ವಿಡಿಯೋ, ಮತ್ತೊಂದು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ರೋಗಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ವಿಡಿಯೋ ತುಣುಕು ಜೊತೆಗೆ ಯುವತಿಯೊಬ್ಬಳು ತನ್ನ ತಂದೆಯನ್ನು ಕಳೆದುಕೊಂಡು ಅಳಲುತ್ತಿದ್ದ ವಿಡಿಯೋವನ್ನು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದೀಗ ಅದು ವೈರಲ್ […]