ಉಡುಪಿ ಜಿಲ್ಲೆಯಲ್ಲಿ ಐಸಿಯು ಬೆಡ್ ಗಳನ್ನು ಹೆಚ್ಚಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಮುಂಜಾಗ್ರತೆಯಾಗಿ ಜಿಲ್ಲೆಯ ಸರಕಾರಿ ಮತು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಸಂಖ್ಯೆಯ ಹೆಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ವೈದ್ಯಕೀಯ ಎಕ್ಸ್ ಪೋರ್ಟ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದರೂ ಕೂಡಾ […]

ಉಡುಪಿ: ಇಂದು 660 ಮಂದಿಗೆ ಕೊರೊನಾ ಪಾಸಿಟಿವ್; ಇಬ್ಬರು ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಇಂದು (ಏ.30)ಜಿಲ್ಲೆಯಲ್ಲಿ 660 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,596ಕ್ಕೆ ಏರಿಕೆಯಾಗಿದೆ. ಉಡುಪಿ ತಾಲ್ಲೂಕಿನಲ್ಲಿ 346, ಕುಂದಾಪುರ 217, ಕಾರ್ಕಳ 93 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಏ.29ರಂದು 2763 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 419 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎರಡು ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 73 ವರ್ಷದ ವೃದ್ಧ […]

ಮೂಡುಬೆಳ್ಳೆ: ನೂರಕ್ಕೂ ಅಧಿಕ ಮಂದಿಗೆ ಕೊರೊನಾ; ಸ್ಪಷ್ಟನೆ ನೀಡಿದ ಗ್ರಾಪಂ

ಉಡುಪಿ: ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ 100ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂಬ ವಿಚಾರ ಸಂಪೂರ್ಣ ಸುಳ್ಳು. ಇಂತಹ ಘಟನೆ ಮೂಡುಬೆಳ್ಳೆ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದು ಪಂಚಾಯತ್ ಸ್ಪಷ್ಟಪಡಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ, ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮೂಡುಬೆಳ್ಳೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಬಿತ್ತರಿಸಿದ್ದಾರೆ. ಇದು ಸಂಪೂರ್ಣ ಸುಳ್ಳು ಎಂದು ಪೆರ್ಣಂಕಿಲ ಪ್ರಾಥಮಿಕ […]

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ₹1.45 ಕೋಟಿ ನಿವ್ವಳ ಲಾಭ

ಪರ್ಕಳ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ವಿಂಶತಿ ವರ್ಷ ಹೊಸ್ತಿಲಲ್ಲಿದ್ದು, ಸಂಘವು 2020-21ನೇ ಸಾಲಿನಲ್ಲಿ ವರ್ಷಾಂತ್ಯಕ್ಕೆ ₹1.55 ಕೋಟಿ ಪಾಲು ಬಂಡವಾಳ, ₹ 6.99 ಕೋಟಿ ಸ್ವಂತ ನಿಧಿಗಳು, ₹73.29 ಕೋಟಿ ಠೇವಣಾತಿ, ₹52.53 ಕೋಟಿ ಸಾಲಗಳು ಹಾಗೂ ₹83.28 ಕೋಟಿ ದುಡಿಯುವ ಬಂಡವಾಳದೊಂದಿಗೆ ದೇಶಕ್ಕೆ ತಗುಲಿದ ಸಾಂಕ್ರಾಮಿಕ ಪಿಡುಗಿನ ಸಂದಿಗ್ಧ ಸ್ಥಿತಿಯಲ್ಲಿಯೂ ಸಂಸ್ಥೆಯು ₹1.45 ಕೋಟಿ ನಿವ್ವಳ ಲಾಭಗಳಿಸಿ ಸಹಕಾರಿ ರಂಗದಲ್ಲಿ ಮುನ್ನುಗ್ಗುತ್ತಿದೆ. ಪರ್ಕಳ ಪ್ರಧಾನ ಕಚೇರಿ, ಬಂಟಕಲ್ಲು ಶಾಖೆ, ಮಣಿಪಾಲ […]

ಖ್ಯಾತ ನ್ಯೂಸ್ ಆ್ಯಂಕರ್ ರೋಹಿತ್ ಸರ್ದಾನ ಇನ್ನಿಲ್ಲ

ನವದೆಹಲಿ: ಕೊರೊನಾ ಸೋಂಕಿನ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದ ಆಜ್​ ತಕ್ ಹಿಂದಿ ಚಾನೆಲ್​ನ ಖ್ಯಾತ ಆ್ಯಂಕರ್ ರೋಹಿತ್ ಸರ್ದಾನಾ, ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರೋಹಿತ್ ಅವರ ಸಾವಿನ ಸುದ್ದಿ‌ಯ ಬಗ್ಗೆ ಝಿ ಟಿವಿಯ ಪ್ರಧಾನ ಸಂಪಾದಕ ಸುಧೀರ್ ಚೌದ್ರಿ ಟ್ವೀಟ್ ಮಾಡಿದ್ದಾರೆ. ಸರ್ದಾನಾ ಸಾವಿನ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪತ್ರಕರ್ತ ರಾಜದೀಪ್ ದೇಸಾಯಿ, ಇದು ಅತ್ಯಂತ ಆಘಾತಕಾರಿ ವಿಷಯ ಎಂದಿದ್ದಾರೆ. ಏಪ್ರಿಲ್ 24ಕ್ಕೆ ಟ್ವೀಟ್ ಮಾಡಿದ್ದ ರೋಹಿತ್ ಸರ್ದಾನಾ ತಮಗೆ ಕೋವಿಡ್ ಪಾಸಿಟಿವ್ ಬಂದಿರೋದಾಗಿ ತಿಳಿಸಿದ್ದರು. […]