ಮಡಿಕೇರಿ ನಗರಸಭೆ: ಬಿಜೆಪಿಗೆ ಭರ್ಜರಿ ಗೆಲುವು
ಮಡಿಕೇರಿ: ಇಲ್ಲಿನ ನಗರಸಭೆಯ 23 ವಾರ್ಡ್‌ಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಗೆಲುವು ದಾಖಲಿಸಿದೆ. ತಲಾ ಒಂದು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದೆ. ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮೈತ್ರಿ ಕೂಟವು ಅಧಿಕಾರದಲ್ಲಿತ್ತು. ಒಟ್ಟು 23 ವಾರ್ಡ್‌ಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು 16 ವಾರ್ಡ್‌ನಲ್ಲಿ ಗೆದ್ದಿದ್ದಾರೆ. ಆ ಮೂಲಕ ನಗರಸಭೆ ಬಿಜೆಪಿ ಪಾಲಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದು ವಾರ್ಡ್‌ನಲ್ಲಿ ಜಯ ಗಳಿಸಿದೆ. ಎಸ್‌ಡಿಪಿಐ ಐದು ವಾರ್ಡ್‌ನಲ್ಲಿ ಗೆದ್ದು […]
27 ವರ್ಷಗಳ ಬಳಿಕ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪರಾಕ್ರಮ: ಭದ್ರಾವತಿ ನಗರಸಭೆಯೂ ಕೈ ವಶ
ಶಿವಮೊಗ್ಗ: ಕಳೆದ 27 ವರ್ಷ ನಂತರ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಿದೆ. 15 ವಾರ್ಡ್ ಗಳ ಪೈಕಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 6 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ , ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಖುದ್ದು ಚುನಾವಣೆ ಪ್ರಚಾರ ನಡೆಸಿದ್ದರು. ಆದರೂ ಬಹುಮತ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್‌ನಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಈಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧ್ಯಕ್ಷ […]
ಹಾಲು ಮಾರಾಟ ಮಾಡಲು ಬೆಳಿಗ್ಗೆ 6ರಿಂದ ರಾತ್ರಿ 8ರ ವರೆಗೆ ಅವಕಾಶ
ಉಡುಪಿ: ಜಿಲ್ಲೆಯಲ್ಲಿ 14 ದಿನಗಳ ಕೋವಿಡ್ ಕರ್ಪ್ಯೂ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10ಗಂಟೆ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹೊರಡಿಸಿರುವ ಆದೇಶದಂತೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಾಲು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.