ಉಡುಪಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಲ್ಲದೆ, ದಂಡ ಕಟ್ಟಲು ಸೂಚಿದ ಟ್ರಾಫಿಕ್ ಎಸ್ಐಗೆ ಧಮ್ಕಿ ಹಾಕಿದ ಬಿಜೆಪಿ ಯುವ ನಾಯಕಿ
ಉಡುಪಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಲ್ಲದೆ, ದಂಡ ಕಟ್ಟಲು ಸೂಚಿದ ಟ್ರಾಫಿಕ್ ಎಸ್ಐಗೆ ಯುವತಿಯೊಬ್ಬಳು ಧಮ್ಕಿ ಹಾಕಿದ ಘಟನೆ ಉಡುಪಿ ಕ್ಲಾಕ್ ಟವರ್ ಬಳಿ ನಡೆದಿದೆ. ಆವಾಜ್ ಹಾಕಿದ ಯುವತಿಯನ್ನು ನೀತಾ ಪ್ರಭು ಎಂದು ಗುರುತಿಸಲಾಗಿದ್ದು, ಈಕೆ ಬಿಜೆಪಿ ಯುವಮೋರ್ಚಾದ ನಾಯಕಿ ಎಂದು ತಿಳಿದುಬಂದಿದೆ. ನಗರದಲ್ಲಿ ಜನತಾ ಕರ್ಪ್ಯೂ ಜಾರಿಯಲ್ಲಿರುವುದರಿಂದ ಅನಗತ್ಯವಾಗಿ ಸಂಚರಿಸುತ್ತಿದ್ದವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿದ್ದರು. ಈ ವೇಳೆ ನೀತಾ ಪ್ರಭು ಮೊಬೈಲ್ ನಲ್ಲಿ ಮಾತನಾಡಿಕೊಂಡು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಳು. ಇದನ್ನು ಕಂಡ ಟ್ರಾಫಿಕ್ ಎಸ್ ಐ […]
ದೇಶದಲ್ಲಿಂದು ಕೊರೊನಾ ಸ್ಫೋಟ: 4 ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆ, 3523 ಮಂದಿ ಮೃತ್ಯು
ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಆರ್ಭಟ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಶನಿವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 4,01,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3523 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,11,853ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ […]