ಬೆಳಗಾವಿ ಲೋಕಸಭೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ರೋಚಕ‌ ಗೆಲುವು

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಕೊನೆಯ ಸುತ್ತಿನ ಎಣಿಕೆಯಲ್ಲಿ ರೋಚಕ ಗೆಲುವು ದಾಖಲಿಸಿದ್ದಾರೆ. ಮಂಗಳಾ ಅಂಗಡಿಗೆ ಭಾರಿ ಪೈಪೋಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 5,240 ಮತಗಳಿಂದ ಪರಾಭವಗೊಂಡಿದ್ದಾರೆ. ಆರಂಭಿಕ ಸುಮಾರು 20 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಮಂಗಳಾ ಅಂಗಡಿ ನಂತರ ಹಿನ್ನಡೆ ಅನುಭವಿಸಿದ್ದರು. ಆದರೆ ನಂತರದ ಸುಮಾರು 35 ಸುತ್ತುಗಳಲ್ಲಿ ಸತೀಶ್ ಜಾರಕಿಹೊಳಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 80 ಸುತ್ತಿನ ನಂತರ […]

ಶಿರ್ವ: ಸ್ನಾನ ಮಾಡಲೆಂದು ನದಿಗಿಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

ಉಡುಪಿ: ಮೂಡುಬೆಳ್ಳೆ ಗ್ರಾಮದ ಪಾಂಬೂರು ಅಮಾಸೆಕರಿಯ ಬಳಿಯ ಪಾಪನಾಶಿನಿ ನದಿಗೆ ಸ್ನಾನ ಮಾಡಲೆಂದು ಇಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಸುಭಾಷ್ ನಗರ ಸರ್ಕಾರಿಗುಡ್ಡೆ ನಿವಾಸಿ ಮೊಹಮ್ಮದ್ ಜಾಬೀರ್(18), ಕುರ್ಕಾಲು ಸುಭಾಷ್ ನಗರದ ನಿವಾಸಿ ಮಹಮ್ಮದ್ ರಿಜ್ವಾನ್(18) ಮತ್ತು ಮೂಡಬಿದಿರೆ ತಾಕೊಡೆ ನಿವಾಸಿ ಕೆಲ್ವಿನ್ ಕ್ಯಾಸ್ತಲಿನೋ(21) ಎಂದು ಗುರುತಿಸಲಾಗಿದೆ.

ನಂದಿಗ್ರಾಮ ಕ್ಷೇತ್ರದ ಫಲಿತಾಂಶಕ್ಕೆ ಬಿಗ್ ಟ್ವಿಸ್ಟ್: ದೀದಿಗೆ ಸೋಲು, ಸುವೇಂದು ಅಧಿಕಾರಿಗೆ ಗೆಲುವು

ಕೋಲ್ಕತ್ತಾ: ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ 1622 ಮತಗಳ ಅಂತರದ ಸೋಲು ಅನುಭವಿಸಿದ್ದಾರೆ.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಮಸ್ಕಿ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಸನಗೌಡ ಅವರು 86,222 ಮತಗಳನ್ನು ಪಡೆದು 30,641 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ 55,581 ಮತಗಳನ್ನು ಪಡೆದು ಪರಾಭವಗೊಂಡರು. ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಗೆ ಮುನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಮಂಗಳಾ ಅಂಗಡಿಗೆ ಇದೀಗ ಹಿನ್ನಡೆಯಾಗಿದೆ. 47ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 2,43,631 ಪಡೆದು ಮಂಗಳಾ ಅಂಗಡಿಕ್ಕಿಂತ 8,595 ಮತಗಳ‌ ಮುನ್ನಡೆ ಸಾಧಿಸಿದ್ದಾರೆ. ಮಂಗಳಾ ಅಂಗಡಿ 2,38,036 ಮತ ಗಳಿಸಿದ್ದಾರೆ.