ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶರಣು ಸಲಗರ ಅವರು 70,556 ಮತಗಳನ್ನು ಪಡೆದು 20,904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಮಾಲಾ ಬಿ. ನಾರಾಯಣ್ 50108 ಮತಗಳನ್ನು ಪಡೆದು ಪರಾಭವಗೊಂಡರು. ಜೆಡಿಎಸ್ ಅಭ್ಯರ್ಥಿ ಸೈಯದ್ ಖಾದ್ರಿ 11390 ಮತಗಳನ್ನು ಪಡೆದರು.

ರೋಚಕ ತಿರುವು ಪಡೆದ ನಂದಿಗ್ರಾಮ ಫೈಟ್: 1500 ಮತಗಳ ಮುನ್ನಡೆ ಸಾಧಿಸಿದ ದೀದಿ

ನಂದಿಗ್ರಾಮ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ಅಭ್ಯರ್ಥಿ ಸುವೇಂದ್ರ ಅಧಿಕಾರಿ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಕೊನೆಯವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ಅಧಿಕಾರಿ ಇದೀಗ 1500 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.

ಅಸ್ಸಾಂ: ಚುನಾವಣೆಯಲ್ಲಿ ಬಳಸದ ಮತಯಂತ್ರ ಎಣಿಕೆ ಕೇಂದ್ರದಲ್ಲಿ ಪತ್ತೆ

ಗುವಾಹಟಿ: ಚುನಾವಣೆಯಲ್ಲಿ ಬಳಸದ ಮತಯಂತ್ರ ಮತ ಎಣಿಕೆ ಕೇಂದ್ರದಲ್ಲಿ ಪತ್ತೆಯಾದ ಘಟನೆ ಅಸ್ಸಾಂನ ಹೈಲಾಕಂಡಿ ಜಿಲ್ಲೆಯಲ್ಲಿ ನಡೆದಿದೆ. ಚುನಾವಣೆಯಲ್ಲಿ ಬಳಸದ ಮತಯಂತ್ರ ಎಣಿಕೆ ಕೇಂದ್ರಲ್ಲಿ ಪತ್ತೆಯಾದ ವಿಷಯ ತಿಳಿದ ಕೂಡಲೇ ಜಿಲ್ಲಾ ಚುನಾವಣಾಧಿಕಾರಿ ಮೇಘ ನಿಧೀ ದಹಲ್ ಅವರು ಮತಗಟ್ಟೆ ಅಧಿಕಾರಿಗಳ ಜತೆ ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಪ್ರಾಥಮಿಕ ತನಿಖೆ ವೇಳೆ, ಮತ ಎಣಿಕೆ ಕೇಂದ್ರದಲ್ಲಿ ಪತ್ತೆಯಾಗಿರುವುದು ಚುನಾವಣೆ ದಿನ ಕಾದಿರಿಸಿದ್ದ ಮತಯಂತ್ರ ಎಂಬುದು ತಿಳಿದುಬಂದಿದೆ. ಚುನಾವಣೆಯ ದಿನ ಪ್ರಮಾದವಶಾತ್ […]

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ: ಬಿಜೆಪಿಗೆ ಭಾರಿ ಮುನ್ನಡೆ

ಉಡುಪಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 25ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ‌ ಮುನ್ನಡೆ ಕಾಯ್ದುಕೊಂಡಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಏಳನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,13,095 ಮತಗಳನ್ನು ಪಡೆದು, 9462 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಸತೀಶ್ ಜಾರಕಿಹೊಳಿ 1,03,633 ಮತಗಳನ್ನು ಪಡೆದಿದ್ದಾರೆ.

ಬೆಳಗಾವಿ, ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ; ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ

ಉಡುಪಿ: ರಾಜ್ಯದ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 7299 ಮತಗಳನ್ನು ಪಡೆದುಕೊಂಡಿದ್ದು, 1751 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 5548 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಏಳನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ […]