ಕುಂದಾಪುರ: ಲಾರಿ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತ್ಯು

ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾ.ಹೆ. ತಲ್ಲೂರು ಸರ್ಕಲ್ ನಲ್ಲಿ ನಡೆದಿದೆ. ಸಬ್ಲಾಡಿ ನಿವಾಸಿ ನೇತ್ರಾವತಿ ಮೊಗವೀರ (40) ಮೃತ ದುರ್ದೈವಿ. ಮೆಡಿಕಲ್ ನಿಂದ ಔಷಧಿ ತೆಗೆದುಕೊಂಡು ಮನೆಗೆ ತೆರಳುವ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಪತಿ ಈಗಾಗಲೇ ತೀರಿಕೊಂಡಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ಉಡುಪಿ ಜಿಲ್ಲೆಯಲ್ಲಿ ಸೆಲೂನ್ ತೆರೆಯಲು ಅನುಮತಿ ನೀಡಿ: ಭಂಡಾರಿ ಮಹಾಮಂಡಲದಿಂದ ಡಿಸಿಗೆ ಮನವಿ

ಉಡುಪಿ: ರಾಜ್ಯ ಸರ್ಕಾರವು ಘೋಷಿಸಿರುವ 14 ದಿನಗಳ ಕೋವಿಡ್ ಕರ್ಪ್ಯೂನಿಂದ ದಿನದ ಸಂಪಾದನೆಯಿಂದ ಜೀವನ ನಿರ್ವಹಣೆ ಮಾಡುತ್ತಿದ್ದ ಕ್ಷೌರಿಕ ವೃತ್ತಿ ಬಾಂಧವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಜಿಲ್ಲೆಯ ಸೆಲೂನ್ (ಕ್ಷೌರದಂಗಡಿ) ಗಳಿಗೆ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಭಂಡಾರಿ ಮಹಾಮಂಡಲದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಕ್ಷೌರದಂಗಡಿಗಳಲ್ಲಿ‌ ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಪ್ರಕಟಿಸಿರುವ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಲಾಗುತ್ತಿದೆ. ಆದರೂ ಸರ್ಕಾರ ಕ್ಷೌರದಂಗಡಿಗಳನ್ನು ತೆರೆಯಲು ಅನುಮತಿ‌ […]

ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟಿಲ್ಲ, ಕೇವಲ 3 ಮಂದಿ ಸತ್ತಿರೋದು: ಸಚಿವ ಸುಧಾಕರ್

ಚಾಮರಾಜನಗರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದವರು ಕೇವಲ 3 ಮಂದಿ ಮಾತ್ರ ಎಂದು ಜಿಲ್ಲಾಡಳಿತ ಹೇಳಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಈ ಕುರಿತು ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವೈದ್ಯರು ಕೊಟ್ಟ ಮಾಹಿತಿ ಪ್ರಕಾರ ನಿನ್ನೆ ಬೆಳಗ್ಗೆ 7 ರಿಂದ ಮಧ್ಯರಾತ್ರಿ 12 ರವರೆಗೆ ಕೋವಿಡ್​ನಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ 14 -16 ದಿನಗಳಿಂದ ಕೊರೊನಾ ತೀವ್ರವಾದ ಮೇಲೆ […]

ಕೆಕೆಆರ್ ಆಟಗಾರರಿಬ್ಬರಿಗೆ ಕೊರೊನಾ ದೃಢ: ಇಂದಿನ ಕೆಕೆಆರ್-ಆರ್ ಸಿಬಿ ಪಂದ್ಯ ಮುಂದೂಡಿಕೆ.?

ಅಹಮದಾಬಾದ್: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಸೋಮವಾರ) ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತ ನೈಟ್‌ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯವನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿದುಬಂದಿದೆ.  

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಘೋರ ದುರಂತ: ಆಕ್ಸಿಜನ್ ಕೊರತೆಯಿಂದ 24 ಮಂದಿ ಕೊರೊನಾ ಸೋಂಕಿತರು ಮೃತ್ಯು

ಚಾಮರಾಜನಗರ: ದೆಹಲಿಯ ಪರಿಸ್ಥಿತಿಯೇ ಇದೀಗ ಕರ್ನಾಟಕಕ್ಕೂ ತಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 24 ಕೊರೊನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಳೆದ ರಾತ್ರಿ 16 ಮಂದಿ ರೋಗಿಗಳು ಮೃತಪಟ್ಟಿದ್ದರೆ, ಇಂದು ನಸುಕಿನ ಜಾವ 4ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬರುವ ಹೊತ್ತಿಗೆ ರೋಗಿಗಳ ಪ್ರಾಣಪಕ್ಷಿ ಹಾರಿಹೋಗಿತ್ತು. ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ […]