ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಸ್ಥಿತಿ ಇದೆ: ಕೊರೊನಾ ಲಕ್ಷಣ ಕಂಡುಬಂದ ಕೂಡಲೇ ಪರೀಕ್ಷಿಸಿಕೊಳ್ಳಿ; ಡಿಸಿ ವಿನಂತಿ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ. ಹೀಗಾಗಿ ಜನರು ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ವಿನಂತಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾಗಿದೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಸೋಂಕಿನ ಲಕ್ಷಣ ಇರುವವರು ನಿರ್ಲಕ್ಷ್ಯ ಮಾಡಬಾರದು. ಲಕ್ಷಣ ಇದ್ದರೂ ಹತ್ತು ಹದಿನೈದು ದಿನ ಮನೆಯಲ್ಲೇ ಇದ್ದು ಕೊರೊನಾ ಉಲ್ಬಣಿಸಿದ ಬಳಿಕ ನೇರ ಐಸಿಯುಗೆ ಬರುವವರ ಸಂಖ್ಯೆ ಹೆಚ್ಚುತ್ತಲೆ […]
ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್; ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸಚಿವರು,ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ದಿನಾಂಕ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ […]
ಐಪಿಎಲ್ ಟೂರ್ನಿ-2021 ರದ್ದುಗೊಳಿಸಿದ ಬಿಸಿಸಿಐ
ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ಪಿಡುಗು ತೀವ್ರಗೊಂಡಿರುವ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸುವುದಾಗಿ ಮಂಗಳವಾರ ಘೋಷಿಸಿದೆ. ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.
ಎರಡು ದಶಕಗಳಿಂದ ಹರಕುಮುರುಕು ಗುಡಿಸಲಿನಲ್ಲಿಯೇ ಬದುಕು; ಮಲ್ಪೆಯ ಈ ಬಡಕುಟುಂಬಕ್ಕೆ ಬೇಕಿದೆ ನೆರವಿನ ಹಸ್ತ.!
ಉಡುಪಿ: ಕಳೆದ 20 ವರ್ಷಗಳಿಂದಲೂ ಈ ಬಡದಂಪತಿಗಳಿಗೆ ಮಡಲಿನ ಗುಡಿಸಲೇ ಅರಮನೆಯಾಗಿದೆ. ಚಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೇ ಹರಕುಮುರುಕು ಗುಡಿಸಲಿನಲ್ಲಿ ಬದುಕು ಸವೆಸುತ್ತಿರುವ ಈ ಕುಟುಂಬದ ಸ್ಥಿತಿ ದಾರುಣವಾಗಿದೆ. ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿರುವ ಗುಡಿಸಲು, ಮರಳು ಮಣ್ಣಿನ ನೆಲದಲ್ಲಿ ಬದುಕು, ತುಂಡು ತುಂಡಾದ ಟರ್ಪಲೇ ರಕ್ಷಣೆ. ಇದು ಮಲ್ಪೆ ತೊಟ್ಟಂನ ಬಡದಂಪತಿಗಳ ಕರುಣಾಜನಕ ಸ್ಥಿತಿ. ಹೌದು, ಮಲ್ಪೆ ತೊಟ್ಟಂ ಪಡುಕೆರೆ ಶಾಂತಿ ನಗರದ ನಿವಾಸಿಗಳಾದ ಸದಾನಂದ ಮತ್ತು ಜಲಜ ಎಂಬುವವರ ಮನೆಯು ತೀವ್ರ ದುಸ್ಥಿತಿಯಲ್ಲಿದೆ. ಇವರು […]
ನಾಳಿನ ಸಿಎಸ್ ಕೆ-ಆರ್ ಆರ್ ಪಂದ್ಯವೂ ಮುಂದೂಡಿಕೆ: ಐಪಿಎಲ್ ಟೂರ್ನಿ ಮುಂಬೈಗೆ ಸ್ಥಳಾಂತರ.?
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಬೌಲಿಂಗ್ ಕೋಚ್ ಎಲ್.ಬಾಲಾಜಿ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಹೀಗಾಗಿ ನಾಳೆ (ಬುಧವಾರ) ನಡೆಯಬೇಕಿದ್ದ ಸಿಎಸ್ ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ಪಂದ್ಯವೂ ಮುಂದೂಡಿಕೆಯಾಗಿದೆ. ಈ ಪಂದ್ಯವನ್ನು ಮರುನಿಗದಿ ಮಾಡಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ. ಹಾಗೆ, ಐಪಿಎಲ್ ಟೂರ್ನಿಯನ್ನು ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ಸರ್ಕಾರದ ಅನುಮತಿ ಕೋರಿದ್ದು, ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಕೋಲ್ಕತ್ತ ಮತ್ತು ಬೆಂಗಳೂರಿನಲ್ಲಿ […]