ಕರಾವಳಿಯಾದ್ಯಂತ ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬಿರುಗಾಳಿ, ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಮೇ 7ರಿಂದ 11ರವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ ಎಂದು ಹೇಳಿದೆ.

ಉಡುಪಿ: ಮುಂದುವರಿದ ಕೊರೊನಾ ಪ್ರಕರಣ; ಆರು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್್ರಕರಣಗಳು   ಮುಂದುವರಿದಿದ್ದು, ಗುರುವಾರ ಜಿಲ್ಲೆಯಲ್ಲಿ 1526 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5061ಕ್ಕೆ ಏರಿಕೆಯಾಗಿದೆ. ಉಡುಪಿ ತಾಲ್ಲೂಕಿನಲ್ಲಿ ಅತೀ ಹೆಚ್ಚು 682, ಕುಂದಾಪುರ 595, ಕಾರ್ಕಳ 242 ಹಾಗೂ ಹೊರ ಜಿಲ್ಲೆಯ ಏಳು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೇ 5ರಂದು 3095 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 384 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ […]

ಕೋವಿಡ್ ನಿಯಂತ್ರಣಕ್ಕೆ ಕಳೆದ ಬಾರಿಯಂತೆ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಕೊರೊನಾ ಸೋಂಕು ತಡೆಗಟ್ಟಲು ಕಳೆದ ಬಾರಿಯಂತೆ ಕಠಿಣವಾದ ಕರ್ಪ್ಯೂ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು‌ ತೀವ್ರಗತಿಯಲ್ಲಿ ಹರಡುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೋವಿಡ್ ಕರ್ಫ್ಯೂ ನಿಂದ ಇದರ ನಿಯಂತ್ರಣ ಅಸಾಧ್ಯವಾಗಿದ್ದು, ಕಳೆದ ವರ್ಷದಂತೆ ಕನಿಷ್ಠ 15 ದಿನಗಳ‌ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೆಡಿಸಿನ್ ಸಹಿತ ಅತೀ‌ ಅವಶ್ಯಕ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಬೇಕು. […]

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಠಿಣ ನಿಯಮ ಜಾರಿ; ಅನಗತ್ಯ ಓಡಾಡಿದರೆ ವಾಹನ ಸೀಜ್

ಮಂಗಳೂರು: ಕೋವಿಡ್ ಅಲೆ ನಿಯಂತ್ರಣಕ್ಕಾಗಿ ನಾಳೆಯಿಂದ (ಮೇ 7) ದ.ಕ‌ ಜಿಲ್ಲೆಯಾದ್ಯಂತ ದ.ಕ. ಜಿಲ್ಲಾಡಳಿತ ಕಠಿಣ ನಿಯಮ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಅದರಂತೆ ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆಯಿತು. ಈ ಸಭೆಯಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಚಿವರು ಆದೇಶ ಹೊರಡಿಸಿದ್ದಾರೆ. […]

ತಾಯಿಯ ಬೆನ್ನಲ್ಲೇ ಸಹೋದರಿಯನ್ನು ಕಳೆದುಕೊಂಡ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ

ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟರ್ ವೇದಾಕೃಷ್ಣಮೂರ್ತಿ ಕೊರೊನಾ ಮಹಾಮಾರಿಯಿಂದ ತಾಯಿಯನ್ನು‌ ಕಳೆದುಕೊಂಡ ಬೆನ್ನಲ್ಲೇ ಇದೀಗ ಸಹೋದರಿಯನ್ನೂ ಕಳೆದುಕೊಂಡು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಳೆದ ವಾರ ವೇದಕೃಷ್ಣಮೂರ್ತಿ ತಾಯಿ ಚೆಲುವಾಂಬ (63) ಕೋವಿಡ್ ಗೆ ಬಲಿಯಾಗಿದ್ದರು. ಇದಾದ ಒಂದೇ ವಾರದಲ್ಲಿ ಸಹೋದರಿಯನ್ನು ಕಳೆದುಕೊಂಡಿದ್ದಾರೆ. ಒಂದೇ ಕುಟುಂಬದ ಐವರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಕಡೂರು ತಾಲೂಕಿನ ಬೀರೂರು ರಸ್ತೆ ಬಳಿಯಿ ಇರುವ ವೇದಾ ಕೃಷ್ಣಮೂರ್ತಿ ಅವರ […]