ಮೇ 10ರಿಂದ 14 ದಿನ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್: ಏನಿದೆ?, ಏನಿಲ್ಲ.?

ಬೆಂಗಳೂರು: ರಾಜ್ಯದಲ್ಲಿ‌ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ನಿಯಂತ್ರಣ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ಮೇ 10ರಿಂದ 24ರ ವರೆಗೆ 14 ದಿನ ಕರ್ನಾಟಕ ರಾಜ್ಯದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಲಾಕ್ ಡೌನ್ ಅವಧಿಯಲ್ಲಿ ಏನಿದೆ?. ಏನಿಲ್ಲ: *ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ. *ನಿಗದಿತ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಸಾರ್ವಜನಿಕರು ಹೊರಗಡೆ ಓಡಾಡುವಂತಿಲ್ಲ. *ಬೆಳಿಗ್ಗೆ 10 ಗಂಟೆ ನಂತರ ಯಾವುದೇ ರೀತಿಯ […]

ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ

ಬೆಂಗಳೂರು: ಲಾಕ್ ಡೌನ್ ಘೋಷಣೆ ಮಧ್ಯೆಯೂ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಮೇ 10ರಿಂದ ದಿನಸಿ ಖರೀದಿ ಸಮಯದಲ್ಲೇ ಅಂದರೆ ಬೆಳಿಗ್ಗೆ 6ರಿಂದ 10ರ ವರೆಗೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೊರೆಂಟ್, ಎಂಎಸ್ಐಎಲ್ ಗಳಲ್ಲಿ ಪಾರ್ಸೆಲ್ ತೆಗೆದುಕೊಳ್ಳಲು ಅವಕಾಶ ನೀಡಿದೆ.

ಸೋಮವಾರದಿಂದ (ಮೇ 10) 14 ದಿನ ಕರ್ನಾಟಕದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ: ಹೋಟೆಲ್, ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಆರ್ಭಟಕ್ಕೆ ತಡೆಯೊಡ್ಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇದೇ ಸೋಮವಾರ (ಮೇ 10)ದಿಂದ ಮೇ 24ರ ವರೆಗೆ ರಾಜ್ಯಾದ್ಯಂತ 14 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ‌ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಣ ಮಾಡಲು ರಾಜ್ಯ ಸರಕಾರವು ರಾಜ್ಯಾದ್ಯಂತ ಮೇ 12ರ ವರೆಗೂ ಕೋವಿಡ್ ಕರ್ಪ್ಯೂ ಜಾರಿಗೊಳಿಸಿತ್ತು. ಅಲ್ಲದೆ, ಇದಕ್ಕೂ […]

ತಮಿಳರಿಗೆ ಸಿಎಂ ಸ್ಟಾಲಿನ್ ರಿಂದ ಭರ್ಜರಿ ಕೊಡುಗೆ: ₹2 ಸಾವಿರ ಕೋವಿಡ್ ಪರಿಹಾರ, ಹಾಲಿನ ದರ ಕಡಿತ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇಂದು ಅವರು ತಮಿಳುನಾಡಿ 8 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರ ಬಳಿಕ ತಮಿಳುನಾಡು ಜನತೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ […]

ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್ ಗೆ ಬಲಿ

ನವದೆಹಲಿ: ಜೈಲು ಸೇರಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೋವಿಡ್–19 ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನು ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. ಆತನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿತ್ತು. ಬಳಿಕ ಭಾರತಕ್ಕೆ ಕರೆತಂದ ಬಳಿಕ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.