ಉಡುಪಿ: ಕರ್ನ್ನಪಾಡಿ ರಥೋತ್ಸವ ಮುಂದೂಡಿಕೆ
ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೇ 13 ರಿಂದ 18ರವರೆಗೆ ನಡೆಯಬೇಕಿದ್ದ ವಾರ್ಷಿಕ ರಥೋತ್ಸವವನ್ನು ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ಸೂಕ್ತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಶ್ರೀದೇವಳದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ ಬಂದರಿನಲ್ಲಿ ಸಾರ್ವಜನಿಕರಿಗೆ ಮೀನು ಮಾರಾಟ ನಿಷೇಧ: ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
ಉಡುಪಿ: ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಚಿಲ್ಲರೆ ವ್ಯಾಪಾರ ಮಾಡಲು ಅವಕಾಶವಿಲ್ಲ. ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಇದ್ದು, ಚಿಲ್ಲರೆ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಮಲ್ಪೆ ಬಂದರಿನ ಒಳಗೆ ಗ್ರಾಹಕರು ಅಧಿಕ ಸಂಖ್ಯೆಯಲ್ಲಿ ಮೀನು ಖರೀದಿಗೆ ಜಮಾಯಿಸುತ್ತಿರುವ ಬಗ್ಗೆ ತಿಳಿದುಬಂದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಯವರು ಇಂದು ಅಧಿಕಾರಿಗಳೊಂದಿಗೆ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಹಕರು ಮೀನು ಖರೀದಿಗೆ ಮಲ್ಪೆ ಬಂದರಿಗೆ ಹೋಗದಂತೆ […]
ಉಡುಪಿ: ಇಂದು 1084 ಮಂದಿಗೆ ಕೊರೊನಾ ಪಾಸಿಟಿವ್; 787 ಮಂದಿ ಡಿಸ್ಚಾರ್ಜ್, 3 ಮಂದಿ ಮೃತ್ಯು
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಮಂಗಳವಾರ ಜಿಲ್ಲೆಯಲ್ಲಿ 1084 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6876ಕ್ಕೆ ಏರಿಕೆಯಾಗಿದೆ. ಉಡುಪಿ ತಾಲ್ಲೂಕಿನಲ್ಲಿ 519, ಕುಂದಾಪುರ 388, ಕಾರ್ಕಳ 169 ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೇ 10ರಂದು 3094 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 787 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 48 ವರ್ಷದ […]
ಉಡುಪಿ: ಮೆಡಿಕಲ್ ಶಾಪ್ ಮಾಲೀಕನ ಮೇಲೆ ಹಲ್ಲೆ
ಉಡುಪಿ: ಮೆಡಿಕಲ್ ಶಾಪ್ ವೊಂದರ ಮಾಲೀಕನ ಮೇಲೆ ಗ್ರಾಹಕರಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ಉಡುಪಿ ಕೊಡಂಕೂರಿನಲ್ಲಿ ನಡೆದಿದೆ. ಉಡುಪಿಯ ಕೊಡಂಕೂರಿನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿರುವ ಪುಷ್ಪರಾಜ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಇವರು ಸರ್ಕಾರದ ಆದೇಶದಂತೆ ಸೋಮವಾರ ರಾತ್ರಿ 8 ಗಂಟೆಗೆ ಮೆಡಿಕಲ್ ಬಂದ್ ಮಾಡಿ ಶೇಟರ್ ಹಾಕುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಗ್ರಾಹಕ ಹರೀಶ್ ಹಾಗೂ ಅವರ ಮಗ ಬಿಪಿ ಮಾತ್ರೆಯನ್ನು ಕೇಳಿದ್ದಾರೆ. ಆದರೆ ಶಾಪ್ ಮುಚ್ಚಲು ಹೊರಟ್ಟಿದ್ದ […]
ಶಿರೂರು ಮಠದ ನೂತನ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮ
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ನೂತನ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಹೋತ್ಸವ ಇದೇ ಮೇ 14ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ದೇವತಾ ಪ್ರಾರ್ಥನೆ , ವಟುವಿಗೆ ಫಲ ಪ್ರದಾನ ಹಾಗೂ (ಗಣಪತಿ ಹೋಮ, ಬ್ರಹ್ಮಕೂರ್ಚ ಹೋಮ,ಪವಮಾನ ಪೂಯಮಾನ ಮಂಡಲ ಹೋಮ, ಧನ್ವಂತರಿ ಹೋಮ,ನವಗ್ರಹ ಹೋಮ,ತಿಲಹೋಮ) ಪ್ರಾಯಶ್ಚಿತ್ತ ಯಾಗಾದಿ ಕರ್ಮಾಂಗಗಳು ಸೋದೆ ವಾದಿರಾಜ ಮಠಾಧೀಶರಾದ ವಿಶ್ವವಲ್ಲಭತೀರ್ಥರ ಉಪಸ್ಥಿತಿಯಲ್ಲಿ ಶೀರೂರು ಮೂಲ ಮಠದಲ್ಲಿ ಇಂದು ನೆರವೇರಿತು. ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರು ಧಾರ್ಮಿಕ ವಿಧಿ ವಿಧಾನಗಳನ್ನು […]