ಕೋವಿಡ್ ಲಸಿಕೆ ಪಡೆಯುವವರಿಗೆ ಎಸ್‌ಎಂಎಸ್ : ಉಡುಪಿ ಜಿಲ್ಲಾಡಳಿತದಿಂದ ಕ್ರಮ

ಉಡುಪಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಜನರು ಉಡುಪಿ ನಗರದಲ್ಲಿನ ಲಸಿಕಾ ಕೇಂದ್ರಗಳಿಗೆ ಬಂದು ಸರದಿ ಸಾಲಿನಲ್ಲಿ ನಿಂತು ಟೋಕನ್ ಪಡೆದು ಲಸಿಕೆಯನ್ನು ಪಡೆಯುತ್ತಿದ್ದು, ಈ ಅನಾನುಕೂಲತೆಯನ್ನು ತಪ್ಪಿಸಲು ಮೊದಲ ಡೋಸ್ ಪಡೆದ ದಿನಾಂಕದ ಜೇಷ್ಥತೆ ಆಧಾರದಲ್ಲಿ (Seniority of first dose date ) ಬರುವ ಅರ್ಹ ವ್ಯಕ್ತಿಗಳಿಗೆ ಉಡುಪಿ ಜಿಲ್ಲಾಡಳಿತದಿಂದ ಮುಂಚಿನ ದಿನವೇ SMS ಕಳುಹಿಸಿ ಲಸಿಕೆ ಪಡೆಯಲು ತಿಳಿಸಲಾಗುವುದು. ಉಡುಪಿ ನಗರದಲ್ಲಿರುವ ಸೈಂಟ್ ಸಿಸಿಲೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತೆರೆಯಲಾಗಿರುವ ಲಸಿಕಾ ಕೇಂದ್ರದಲ್ಲಿ […]

ಉಡುಪಿ: ಇಂದು 919 ಮಂದಿಗೆ ಕೊರೊನಾ ಪಾಸಿಟಿವ್; 837 ಮಂದಿ ಡಿಸ್ಚಾರ್ಜ್, 6 ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು (ಮೇ 12) 919 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6952ಕ್ಕೆ ಏರಿಕೆಯಾಗಿದೆ. ಉಡುಪಿ ತಾಲ್ಲೂಕಿನಲ್ಲಿ 576, ಕುಂದಾಪುರ 257, ಕಾರ್ಕಳ 83 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೇ 11ರಂದು 2957 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 837 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 75 ಮತ್ತು 80 ವರ್ಷದ ಇಬ್ಬರು […]

ಕಾರ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ

ಉಡುಪಿ: ಕಳೆದ ಎರಡು ವರ್ಷಗಳ ಹಿಂದೆ ಕಾರ್ಕಳ‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 5 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ‌ ದೋಷಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ. ಸಂತೋಷ್ ಕೆ. (35) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು, ಈತನಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ […]

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಭೀತಿ.!

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ‘ತೌಕ್ತೆ’ ಚಂಡಮಾರುತ ಏಳುವ ಸಾಧ್ಯತೆಗಳಿವೆ. ಚಂಡಮಾರುತದಿಂದ ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಮೇ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ತೀವ್ರವಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ದೋಣಿಗಳು, ಮೀನುಗಾರಿಕೆಗೆ ಇಳಿಯಬಾರದು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಸೇರುವಂತೆ ಕರಾವಳಿ ಕಾವಲು ಪಡೆ ಸೂಚಿಸಿದೆ. .

‘ಟೀಮ್ ಸಹರಾ ಉಡುಪಿ’ ಸಂಘಟನೆಯಿಂದ ಬಡಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

ಉಡುಪಿ: ಕೋವಿಡ್ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ತೀರಾ ಬಡ ಕುಟುಂಬಗಳಿಗೆ ‘ಟೀಮ್ ಸಹರಾ ಉಡುಪಿ’ ಸಂಘಟನೆಯು ದಿನಸಿ ಕಿಟ್ ವಿತರಿಸುವ ಮೂಲಕ ನೆರವಿನ ಹಸ್ತ ಚಾಚಿದೆ. ವಿದ್ಯಾರ್ಥಿಗಳೇ ಸೇರಿಕೊಂಡು ಕಟ್ಟಿರುವ ಟೀಮ್ ಸಹರಾ ಕಳೆದ ಹಲವಾರು ವರ್ಷಗಳಿಂದ ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು‌ ನಡೆಸಿಕೊಂಡು ಬಂದಿದೆ. ಇದೀಗ ಲಾಕ್ ಡೌನ್ ಲ್ಲಿ ಕಳೆದ ಐದು ದಿನಗಳಲ್ಲಿ ಸುಮಾರು 25 ಅಧಿಕ‌ ಬಡಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ ಮಾಡುವ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ. ಲಾಕ್ ಡೌನ್ ಮುಗಿಯುವವರೆಗೂ ಈ […]