ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೂಡಿಕೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಜೂನ್ 21 ರಿಂದ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಶಾಲಾ ಸಂಘಟನೆಗಳ ಆತಂಕವನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಕೋವಿಡ್ ಎರಡನೇ ಅಲೆಯ ಹರಡುವಿಕೆ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ, ಸಾಕಷ್ಟು ದಿನಗಳ ಮೊದದಲೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.