ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರ: ಭಾರೀ ಆವಾಂತರ ಸೃಷ್ಟಿಸುವ ಸಾಧ್ಯತೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಮತ್ತಷ್ಟು ಹೆಚ್ಚಿದ್ದು, ಇದರ ಪರಿಣಾಮ ‘ತೌಕ್ತೆ’ ಚಂಡಮಾರುತ ಮತ್ತಷ್ಟು ಪ್ರಬಲಗೊಂಡಿದೆ. ಕೇರಳದಿಂದ ಕರ್ನಾಟಕ ಕರಾವಳಿಯಿಂದ ಗುಜರಾತ್‌ನತ್ತ ಸಾಗಿರುವ ಚಂಡಮಾರುತ ಪೋರಬಂದರ್‌ ಹಾಗೂ ನಲಿಯಾ ನಡುವಿನ ಕರಾವಳಿ ಪ್ರದೇಶವನ್ನು ಮೇ 18ರ ವೇಳೆಗೆ ದಾಟುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಮೇ 16ರಿಂದ 18ರ ವರೆಗಿನ ಅವಧಿಯಲ್ಲಿ ತೌಕ್ತೆ ಚಂಡಮಾರುತ ಹೆಚ್ಚು ತೀವ್ರಸ್ವರೂಪ ಪಡೆದುಕೊಳ್ಳಲಿದೆ ಎಂದೂ ಹೇಳಿದೆ.

ತೀವ್ರಗೊಂಡ ಕಡಲಿನ ಅಬ್ಬರ: ಕಾಪು ಲೈಟ್ ಹೌಸ್ ಸುತ್ತಮುತ್ತಲಿನಲ್ಲಿ‌ ಹೆಚ್ಚಿದ ಆತಂಕ

ಕಾಪು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೌಕ್ತೆ ಚಂಡಮಾರುತ ಪರಿಣಾಮ ಕಡಲು ಪ್ರಕ್ಷುಬ್ದಗೊಂಡಿದ್ದು, ಕಾಪು ಲೈಟ್ ಸಮೀಪದಲ್ಲಿ ಕಡಲಿನ ಆರ್ಭಟ ಜೋರಾಗಿದೆ. ಇದರಿಂದ ಸಮುದ್ರ ತೀರ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಮುದ್ರ ವಿಸ್ತಾರಗೊಂಡು ಕಡಲ್ಕೊರೆತದ ಭೀತಿ ಎದುರಾಗಿದ್ದು, ಲೈಟ್ ಹೌಸ್ ನ ಸುತ್ತಲೂ ಸಮುದ್ರದ ನೀರು ಆವರಿಸಿಕೊಂಡಿದೆ. ಕಾಪು ಬೀಚ್ ಸುತ್ತಮುತ್ತಲಿನ ಲೈಟ್ ಹೌಸ್ ವಾರ್ಡ್, ಕೋಟೆ ಕೊಪ್ಪಲ, ಸುಬ್ಬಯ್ಯ ತೋಟ, ಬೈರುಗುತ್ತು ತೋಟ, ಗರಡಿ ವಾರ್ಡ್, ಲಕ್ಷ್ಮೀ ನಗರ ವ್ಯಾಪ್ತಿಯ 30 ಕ್ಕೂ […]

ಹಿಂದೂ ದೇವರ ನಿಂದನೆ; ಉದ್ಯಮಿಯ ಬಂಧನ

ಮಂಗಳೂರು: ಹಿಂದೂ ದೇವರಿಗೆ ನಿಂದಿಸಿದ ಆರೋಪದಡಿ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ. ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ ಬಂಧಿತ. ಈತ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಡಿಯೋ‌ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಯವರು ಬಂಟ್ವಾಳ ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ಫರ್ನಿಚರ್ ಅಂಗಡಿ ಸಹಿತ ವಿವಿಧ […]

ನಾಳೆಯಿಂದ ಸಂಪೂರ್ಣ ಬಂದ್: ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು.!

ರಾಯಚೂರು: ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಮೇ 16ರಿಂದ 18ರ ವರೆಗೆ ಪೂರ್ಣ ಪ್ರಮಾಣದ ಲಾಕ್ ಡೌನ್ ಘೋಷಿಸಿದ್ದು, ಹೀಗಾಗಿ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದ ದೃಶ್ಯಗಳು ಅಲ್ಲಾಲ್ಲಿ ಕಂಡುಬಂತು. ಈ ಮೊದಲು ಬೆಳಿಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಜತೆಗೆ ಮದ್ಯ ಖರೀದಿಗೂ ಅವಕಾಶ ನೀಡಲಾಗಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಕಾರಣಕ್ಕೆ ಮೂರು ದಿನ ಸಂಪೂರ್ಣ ಬಂದ್ ಆದೇಶ ಹೊರಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜನರು ಮೂರು ದಿನಕ್ಕೆ ಬೇಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ಖರೀದಿಸಿದರು. […]

ತೌಕ್ತೆ ಚಂಡಮಾರುತ ಎಫೆಕ್ಟ್: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ತೀವ್ರಗೊಂಡ ಕಡಲ್ಕೊರೆತ

ಉಡುಪಿ: ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ತೌಕ್ತೆ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ಇಂದು ಧಾರಾಕಾರವಾಗಿ ಮಳೆ ಸುರಿದಿದೆ. ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು ಹಾಗೂ ಕಾಪು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಇಂದು ಮುಂಜಾನೆ ಮೂರು ಗಂಟೆಗೆ ಶುರುವಾದ ಗಾಳಿಮಳೆ ಕೆಲಕಾಲ ಜೋರಾಗಿ ಸುರಿದಿದೆ. ಬೆಳಿಗ್ಗೆ ಕೊಂಚ ಬಿಡುವುಕೊಟ್ಟಿದ್ದ ಮಳೆ, 11 ಗಂಟೆಯ ಬಳಿಕ ಧಾರಾಕಾರವಾಗಿ ಸುರಿದಿದೆ. ಕುಂದಾಪುರ, ಬೈಂದೂರು ಹಾಗೂ ಕಾಪು ತಾಲೂಕಿನಲ್ಲಿ ಸಮುದ್ರದಲೆಗಳ ಅಬ್ಬರಕ್ಕೆ ಕಡಲ್ಕೊರೆತ ಉಂಟಾಗಿದೆ. ಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿದ್ದು, […]