ರಾಜ್ಯ ದಲ್ಲಿಂದು ಕಡಿಮೆಯಾಯ್ತು ಕೋವಿಡ್ ಪ್ರಕರಣ: ಗುಣಮುಖರಾದವರು ಜಾಸ್ತಿ

ಬೆಂಗಳೂರು: ಇಂದು ಹೊಸ ಕೋವಿಡ್-19 ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಇಂದು 36 ಸಾವಿರದ 475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 1581457ಕ್ಕೆ ಏರಿಕೆಯಾಗಿದೆ. 31 ಸಾವಿರದ 531 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2203462 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 600147 ಕ್ಕೆ  ಏರಿಕೆಯಾಗಿದೆ.  403 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿನಿಂದ ಒಟ್ಟಾರೇ, ಮೃತಪಟ್ಟವರ ಸಂಖ್ಯೆ 21, 837ಕ್ಕೆ ಏರಿಕೆಯಾಗಿದೆ. […]

ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಾರಸ್ವತ ಸಮಾಜ ಬಾಂಧವರಿಗೆ ನೆರವು

ಉಡುಪಿ: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇರುವ ಹಿನ್ನೆಲೆಯಲ್ಲಿ , ಯಾವುದೇ ಆದಾಯವಿಲ್ಲದೆ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಾರಸ್ವತ ಸಮಾಜ ಬಾಂಧವರ ನೆರವಿಗಾಗಿ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ (ರಿ.) ಬಂಟಕಲ್ಲು, ಮಣಿಪಾಲ, ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ವೇದಿಕೆ  ಮಣಿಪಾಲ ಮತ್ತು ಶ್ರೀ ದುರ್ಗಾ ಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಪರ್ಕಳ ಇವರ ಸಹಭಾಗಿತ್ವದಲ್ಲಿ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಸುಮಾರು ಒಂದು ನೂರಕ್ಕೂ ಅಧಿಕ ಕುಟುಂಬಗಳನ್ನು ಆಯ್ಕೆ […]

ಕುಂದಾಪುರದಲ್ಲಿ ಸದ್ಯದಲ್ಲೇ ಆಮ್ಲಜನಕ ಘಟಕ ನಿರ್ಮಾಣ

ಕುಂದಾಪುರ:  ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್‍) ತಿಳಿಸಿದೆ. ಪ್ರೆಷರ್ ಸ್ವಿಂಗ್ ಅಡ್ಸಾರ್ಬ್‍ ಷನ್‍ (ಪಿಎಸ್‍ಎ) ವೈದ್ಯಕೀಯ ಆಮ್ಲಜನಕ ಸ್ಥಾವರ ನಿರ್ಮಾಣದ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಜೂನ್‍ ಅಂತ್ಯ ಇಲ್ಲವೇ ಜುಲೈನಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ ಈ ಘಟಕ ಪ್ರತಿ ನಿಮಿಷಕ್ಕೆ 500 ಲೀಟರ್ […]

ಜಿಲ್ಲಾ ಕೇಂದ್ರಗಳಿಗೂ ಆಕ್ಸಿಜನ್ ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಆರ್ ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ  ಸಹಭಾಗಿತ್ವದಲ್ಲಿ ನಾಳೆಯಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. […]

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆರಿಂದ ಕೋವಿಡ್ ನಿರ್ವಹಣೆ, ತೌಕ್ತೆ ಚಂಡಮಾರುತದ ಹಾನಿಯ ಅವಲೋಕನ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರು ಕಳೆದ ಎಂಟು ದಿನಗಳಲ್ಲಿ ಇದೀಗ ಎರಡನೇ ಬಾರಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಕೋವಿಡ್-19 ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ ನಾಗರೀಕರಿಗೆ ಬೆಡ್ ಹಂಚಿಕೆ, ಆಕ್ಸಿಜನ್ ಪೂರೈಕೆ, ರೆಮಿಡಿಸಿವರ್ ಸರಬರಾಜು, ವ್ಯಾಕ್ಸೀನ್ ನೀಡುವಿಕೆಯೇ ಮೊದಲಾದ ವಿಚಾರಗಳ ಬಗ್ಗೆ ಕೂಲಂಕುಷವಾಗಿ ಮಾಹಿತಿಯನ್ನು ಪಡೆದುಕೊಂಡ ಸಂಸದೆ ಶೋಭಾ ಕರಂದ್ಲಾಜೆ, ಆಸ್ಪತ್ರೆಗಳಿಗೆ ದಾಖಲಾಗುವ ಜಿಲ್ಲೆಯ […]