ಮಣಿಪಾಲ: ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ದೃಢ

ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕಪ್ಪು ಶಿಲೀಂದ್ರ (ಬ್ಲ್ಯಾಕ್ ಫಂಗಸ್) ಸೋಂಕಿಗೆ ತುತ್ತಾದ ಹೊರಜಿಲ್ಲೆಯ ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಏಳು ಜನರ ಪೈಕಿ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹರಿಹರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ರಾಣಿಬೆನ್ನೂರು, ಹುಬ್ಬಳ್ಳಿ ಹಾಗೂ ಧಾರವಾಡಗಳಿಂದ ಬಂದ ಈ ಸೋಂಕಿತರೆಲ್ಲರೂ ಮಧುಮೇಹ ಕಾಯಿಲೆ ಬಳಲುತ್ತಿದ್ದು, ಎಲ್ಲರೂ ಕೋವಿಡ್‌ಗೆ ಪಾಸಿಟಿವ್ ತುತ್ತಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಏಳು ಮಂದಿಯಲ್ಲಿ ದಾವಣಗೆರೆಯ […]
ಶಿರ್ವ: ಕೋಳಿ ಅಂಕ ಅಡ್ಡೆಗೆ ಪೊಲೀಸ್ ದಾಳಿ; ಇಬ್ಬರ ಬಂಧನ, ಹಲವಾರು ವಾಹನ ವಶ

ಉಡುಪಿ: ಕೋವಿಡ್ ಲಾಕ್ ಡೌನ್ ಮಧ್ಯೆಯೂ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರು ಬಂಧಿಸಿ, ಹಲವು ವಾಹನಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶಿರ್ವ ಸೊರ್ಪು ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಬಳಿ ಮಂಗಳವಾರ ಸಂಜೆ ನಡೆದಿದೆ. ಪೊಲೀಸ್ ದಾಳಿ ವೇಳೆ ಇತರೆ 6 ಮಂದಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಮೂಡುಬೆಳ್ಳೆ ಕಂಡಿಗ ನಿವಾಸಿ ಜಯ ಪೂಜಾರಿ (66) ಮತ್ತು ಪ್ರಸಾದ್ ಕುತ್ಯಾರ್ (38) ಎಂದು ಗುರುತಿಸಲಾಗಿದೆ. ಸುಂದರ ಆತ್ರಾಡಿ, ಸೂರ್ಯ ಎಡ್ಮೇರು, […]
ಉಡುಪಿ: ಕೋವಿಡ್ ನಿಯಮ ಉಲ್ಲಂಘನೆ; 94 ವಾಹನ್ ಸೀಜ್, ₹70 ಸಾವಿರ ದಂಡ ವಸೂಲಿ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಅಧಿಕಾರಿಗಳು ಇಂದು ಜಿಲ್ಲೆಯಾದ್ಯಂತ ಕೋವಿಡ್ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಕುಂದಾಪುರ ತಾಲೂಕಿನಲ್ಲಿ ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹಾಗೆ, ಕಾರ್ಕಳ ಹಾಗೂ ಬೈಂದೂರು ತಾಲ್ಲೂಕುಗಳಲ್ಲಿ ಆಯಾ ತಾಲೂಕಿನ ತಹಶೀಲ್ದಾರರ ನೇತೃತ್ವದಲ್ಲಿ […]
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುದೇಮುಗೇರು ಮತ್ತು ಮಾವಿನಕಟ್ಟೆ ಸೀಲ್ ಡೌನ್ ಪ್ರದೇಶದ 130 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೀಲ್ ಡೌನ್ ಪ್ರದೇಶವಾದ ಸುದೆಮುಗೇರು ಮತ್ತು ಮಾವಿನಕೆಟ್ಟೆಯ 130 ಕುಟುಂಬ ಗಳಿಗೆ ₹1.50 ಲಕ್ಷ ವೆಚ್ಚದಲ್ಲಿ ಅಕ್ಕಿ ಮತ್ತು ದಿನ ಬಳಕೆಯ ವಸ್ತುಗಳ ಆಹಾರ ಕಿಟ್ ಅನ್ನು ವಿತರಣೆ ಮಾಡಲಾಯಿತು. ಧರ್ಮಸ್ಥಳ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಕಿಟ್ ಗಳನ್ನು ವಿತರಿಸಿ ಮಾತನಾಡಿ, ಕೊರೊನಾ ಮಹಾಮಾರಿಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಸಾವಿರಕ್ಕೂ ಮಿಕ್ಕಿ ಪ್ರಕರಣಗಳಿದ್ದು, ಸುದೇಮುಗೇರು ಮತ್ತು ಮಾವಿನಕಟ್ಟೆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದಾಗಿ ಜನರ […]
ತೌಕ್ತೆ ಬೆನ್ನಲ್ಲೇ ಕರಾವಳಿಗೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಭೀತಿ!.

ಬೆಂಗಳೂರು: ತೌಕ್ತೆ ಚಂಡಮಾರುತದ ಬೆನ್ನಲ್ಲೇ ಇದೀಗ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಆತಂಕ ಎದುರಾಗಿದೆ. ಹೌದು, ಮೇ 23ರಂದು ಬಂಗಾಳಕೊಲ್ಲಿಯಲ್ಲಿ ಈ ಚಂಡಮಾರುತ ಸೃಷ್ಟಿಯಾಗಲಿದ್ದು, ಇದಕ್ಕೆ “ಯಾಸ್” ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಹಾಗೆ, ಇದು ಐದು ದಿನಗಳ ಕಾಲ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿದ್ದ ತೌಕ್ತೆ ಚಂಡಮಾರುತ ಕರ್ನಾಟಕ ಕರಾವಳಿ ಭಾಗ ಸಹಿತ ಹಲವು ರಾಜ್ಯಗಳಲ್ಲಿ ಅಪಾರ ಹಾನಿ ಉಂಟುಮಾಡಿತ್ತು. ಹವಾಮಾನ ಇಲಾಖೆಯ ವರದಿ ಪ್ರಕಾರ […]