ಕುಂದಾಪುರದಲ್ಲಿ ಅನಗತ್ಯ ವಾಹನ ಓಡಾಟ ನಡೆಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮ: ಇನ್ಮುಂದೆ ಬಿಗಿ ನಿಯಮ
ಕುಂದಾಪುರ : ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತ ಬುಧವಾರದಿಂದ ಬಿಗು ಕ್ರಮಕ್ಕೆ ಮುಂದಾಗಿದೆ. ಜನರಿಗೆ ಅಗತ್ಯ ವಸ್ತುಗಳನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ತೀರಾ ಅವಶ್ಯಕತೆ ಇದ್ದರಷ್ಟೇ ಪೇಟೆಗೆ ಬರಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಗ್ರಾಮ ವ್ಯಾಪ್ತಿಯನ್ನು ಬಿಟ್ಟು ಅನಗತ್ಯವಾಗಿ ವಾಹನಗಳು ಹೊರ ಸಂಚರಿಸಿದಂತೆ ನಿರ್ಬಂಧಿಸಿ ಸಾರ್ವಜನಿಕ ಮಾಹಿತಿ ನೀಡಲಾಗಿತ್ತು. ಧ್ವನಿ ವರ್ಧಕದ ಮೂಲಕ ಪ್ರಚಾರ ನಡೆಸಲಾಗಿತ್ತು. ಸಾಮಾಜಿಕ ಜಾಲ ತಾಣಗಳಲ್ಲಿಯೂ ಈ ಬಗ್ಗೆ […]
ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೇ 23ಕ್ಕೆ ನಿರ್ಧಾರ: ಸಿಎಂ ಯಡಿಯೂರಪ್ಪ
ಬೆಂಗಳೂರು: ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು, ಅದನ್ನು ವಿಸ್ತರಿಸುವ ಕುರಿತು ಮೇ 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಲಾಕ್ ಡೌನ್ ನಿಂದ ಯಾವ ಮಟ್ಟಿಗೆ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲಿ ಪರಿಣಾಮ ಬೀರಿದೆ, ಮುಂದೆ ಏನು ಅಗತ್ಯ ಕ್ರಮಗಳನ್ನು ತೆಗೆದುಕೊಂಡರೆ ಉತ್ತಮ ಎಂದು ಸಚಿವರು, ಅಧಿಕಾರಿಗಳೊಂದಿಗೆ 23ರಂದು ಸಭೆ ನಡೆಸಿ ತೀರ್ಮಾನಕ್ಕೆ […]
ರಾಜ್ಯ ಸರಕಾರ ಘೋಷಿಸಿದ ಪರಿಹಾರ ಪ್ಯಾಕೇಜ್ ನಲ್ಲಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಂಚನೆ: ಐಟಾ ಉಡುಪಿ ಜಿಲ್ಲಾಧ್ಯಕ್ಷ ಅಸ್ಲಮ್ ಹೈಕಾಡಿ ಖಂಡನೆ
ಉಡುಪಿ: ರಾಜ್ಯ ಸರ್ಕಾರ ಕೋವಿಡ್ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವವರಿಗೆ 1250 ಕೋಟಿ ರೂಪಾಯಿಯ ಪರಿಹಾರ ಘೋಷಿಸಿದ್ದು, ಇದರಿಂದ ಅನುದಾನ ರಹಿತ ಶಾಲಾ ಶಿಕ್ಷಕರನ್ನು ಹೊರಗಿಟ್ಟಿರುವುದನ್ನು ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸ್ಲಮ್ ಹೈಕಾಡಿ ಖಂಡಿಸಿದ್ದಾರೆ. ಈಗಾಗಲೇ ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಅನುದಾನ ರಹಿತ ಶಾಲಾ ಶಿಕ್ಷಕರು ಆರ್ಥಿಕವಾಗಿ ಬಹಳಷ್ಟು ಸಂಕಷ್ಟದಲ್ಲಿದ್ದು, ಅವರಿಗೆ ಸೂಕ್ತ ಅರ್ಥಿಕ ನೆರವು ನೀಡಬೇಕಾಗಿದ್ದ ಸರಕಾರ ಇದೀಗ ಘೋಷಿಸಿದ ಅರ್ಥಿಕ ಪ್ಯಾಕೇಜ್ ನಿಂದ ಹೊರಗಿಟ್ಟಿದ್ದು ದುರದೃಷ್ಟಕರವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]
ರಾಜ್ಯ ಸರ್ಕಾರದಿಂದ ₹1,250 ಕೋಟಿ ಲಾಕ್ ಡೌನ್ ಪರಿಹಾರ ಘೋಷಣೆ
ಬೆಂಗಳೂರು: ಲಾಕ್ ಡೌನ್ ಘೋಷಣೆಯಿಂದ ಹಲವು ಅಸಂಘಟಿತ ವಲಯಗಳ ಕಾರ್ಮಿಕರಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಯಾರಿಗೆ ಎಷ್ಟು ಆರ್ಥಿಕ ನೆರವು: 1) ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂ ಪರಿಹಾರ. 2) ಅಟೋ, ಟ್ಯಾಕ್ಸಿ ಚಾಲಕರಿಗೆ 3 ಸಾವಿರ ರೂ ಪರಿಹಾರ 3) ಕಲಾವಿದರು, […]
ಉಡುಪಿ: ಲಾಕ್ ಡೌನ್ ನಿಯಮ ಉಲ್ಲಂಘನೆ ವಿರುದ್ಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ; ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳು ಸೀಜ್, ಅಂಗಡಿಗಳ ವಿರುದ್ಧ ಕ್ರಮ
ಉಡುಪಿ: ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ, ಈ ಅವಕಾಶವನ್ನು ಕೆಲವರು ದುರ್ಬಳಕೆ ಮಾಡಿಕೊಂಡು ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೇ ಫೀಲ್ಡ್ ಗೆ ಇಳಿದಿದ್ದಾರೆ. ಸಂಚಾರ ದಟ್ಟನೆ ಹೆಚ್ಚಾಗಿದ್ದ ಮಲ್ಪೆ ಮುಖ್ಯರಸ್ತೆಗೆ ಏಕಾಏಕಿ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅನಾವಶ್ಯಕವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಕಡಿವಾಣ ಹಾಕಿದರು. ರಸ್ತೆಯಲ್ಲಿ ಓಡಾಡುತ್ತಿದ್ದ ಜನರನ್ನು ಚದುರಿಸಿದರು. […]