ಉಡುಪಿ: ಕೊರೊನಾ ಸೋಂಕಿತರ ಮನೆ ಸೀಲ್ ಡೌನ್ ಮಾಡುವ ಪ್ರಕ್ರಿಯೆ ಮತ್ತೆ ಆರಂಭ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ದೃಢಪಟ್ಟವರು ಹಾಗೂ ಅವರ ಮನೆಯವರು ಹೊರಗಡೆ ಓಡಾಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಬಂದಂತಹ ವ್ಯಕ್ತಿಗಳ ಮನೆಯನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ನಗರದಲ್ಲಿ ಕೊರೊನಾ ಸೋಂಕು ದೃಢಪಟ್ಟ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಮನೆಗಳನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತಿದ್ದಾರೆ. ಅದರೊಂದಿಗೆ ಮನೆಯವರಿಗೆ ಧೈರ್ಯ ತುಂಬಿ, ಕೋವಿಡ್ ಬಗ್ಗೆ ಜಾಗೃತಿಯನ್ನು […]
ಲಾಕ್ ಡೌನ್ ವಿಶೇಷ ಪ್ಯಾಕೇಜ್ ಘೋಷಣೆ: ಹೋಟೆಲ್ ನೌಕರರು, ಮಾಲೀಕರಿಗೆ ಅನ್ಯಾಯ; ತಲ್ಲೂರು ಶಿವರಾಮ ಶೆಟ್ಟಿ
ಉಡುಪಿ: ಕೋವಿಡ್ ಎರಡನೇ ಅಲೆಯಿಂದ ಹೋಟೆಲ್ ಉದ್ಯಮ ಸಂಪೂರ್ಣ ನೆಲಕಚ್ಚಿದೆ. ಮಾಲೀಕರು ಹಾಗೂ ನೌಕರರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಈ ಸಂಕಷ್ಟದ ಮಧ್ಯೆಯೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್‌ನಲ್ಲಿ ಹೋಟೆಲ್ ನೌಕರರು, ಮಾಲೀಕರನ್ನು ಪರಿಗಣಿಸದೆ ಅನ್ಯಾಯ ಮಾಡಿದೆ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಹೋಟೆಲ್, ಸಣ್ಣ ಕ್ಯಾಂಟೀನ್, ಗೂಡಾಂಗಡಿ ಹಾಗೂ ರೆಸ್ಟೋರೆಂಟ್‌ಗಳಿಗೆ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಉದ್ಯಮ ಮುಂದುವರಿಸಿಕೊಂಡು ಹೋಗುವುದು ಬಹುದೊಡ್ಡ ಸವಾಲಾಗಿದೆ. ಬ್ಯಾಂಕುಗಳ […]
ಸೌಹಾರ್ದ ಸಹಕಾರಿ ಸಿಬ್ಬಂದಿಗಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ ಮನವಿ
ಉಡುಪಿ : ಜಿಲ್ಲೆಯಲ್ಲಿ 130ಕ್ಕಿಂತ ಜಾಸ್ತಿ ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿದ್ದು ಸುಮಾರು 200ಕ್ಕಿಂತ ಜಾಸ್ತಿ ಸಿಬ್ಬಂದಿಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ 2 ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ . ಬಹುತೇಕ ಎಲ್ಲಾ ಸೌಹಾರ್ದ ಸಹಕಾರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಇವರಿಗೆ ಯಾವುದೇ ವ್ಯಾಕ್ಸಿನ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸೌಹಾರ್ದ ಒಕ್ಕೂಟ ತಿಳಿಸಿದೆ. ಇಂಥ ಕರೋನಾ ಸಂಕಷ್ಟ ಕಾಲದಲ್ಲಿ ಕೂಡ ಸೌಹಾರ್ದ ಸಹಕಾರಿಗಳು ಉಡುಪಿ […]
ಉಡುಪಿ: ತೀವ್ರ ನಷ್ಟದಲ್ಲಿರುವ ಟೂರ್ ಆಪರೇಟರ್ ಗಳಿಗೆ ಸರಕಾರ ನೆರವಾಗುವಂತೆ ಮನವಿ
ಉಡುಪಿ:ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಲಯಗಳಿಗೆ ಕೊರೋನಾ ಲಾಕ್ ಡೌನ್ ಗಂಭೀರವಾದ ಪರಿಣಾಮವನ್ನುಂಟು ಮಾಡಿದ್ದು ತೀವ್ರ ನಷ್ಟದಿಂದ ಚೇತರಿಸಿಕೊಳ್ಳಲು ಆಗದಷ್ಟು ಹೊಡೆತ ಈ ವಲಯಗಳಿಗೆ ಬಿದ್ದಿದೆ. ಅದರಲ್ಲೂ ಪ್ರವಾಸೋದ್ಯಮವನ್ನೆ ನಂಬಿಕೊಂಡಿದ್ದ ಟೂರ್ ಆಪರೇಟರ್ ಗಳಂತೂ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಸರಕಾರದ ಮಾನ್ಯತೆ ಪಡೆದ ಟೂರ್ ಓಪರೇಟ್ ಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಉಡುಪಿಯ ಪ್ರತಿಷ್ಠಿತ ಟೂರ್ ಒಪರೇಟ್ ಪಯಣ ಟ್ರಾವೆಲ್ಸ್ ಸಂಸ್ಥೆಯ ಮಾಲಕ ಉದಯ ಕೆ ಶೆಟ್ಟಿ ಮನವಿ ಮಾಡಿದ್ದಾರೆ. ಯಾವುದೇ ಪುಣ್ಯಕ್ಷೇತ್ರಗಳಿಗೆ ಪ್ರವಾಸಿಗರು ಹೋಗಲು ಸಾಧ್ಯವಾಗುತ್ತಿಲ್ಲ. […]