ಬಡವರಿಗೆ ಸದ್ಯದಲ್ಲೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ ವಿಶೇಷ ಆರ್ಥಿಕ ಪ್ಯಾಕೇಜ್ ಸಿಗದ ಬಡವರು ಮತ್ತು ಕೂಲಿ ಕಾರ್ಮಿಕರಿಗಾಗಿ ಇನ್ನು 10–12 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಬಿಬಿಎಂಪಿ ಕೋವಿಡ್ ವಾರ್‌ರೂಂಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿ ಅವರು ಈ ವಿಷಯ ತಿಳಿಸಿದರು. ಸರ್ಕಾರದ ಹಣಕಾಸಿನ ಇತಿಮಿತಿಯಲ್ಲಿ ಮೊದಲ ಪ್ಯಾಕೇಜ್ ನೀಡಿದ್ದೇವೆ. ದೊಡ್ಡದಾಗಿ ಮಾತನಾಡುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದು ಜಗತ್ತಿಗೇ […]
ಕಾರ್ಕಳದಲ್ಲಿ ವಿತರಣೆಯಾಯ್ತು ಪ್ಲಾಸ್ಟಿಕ್ ಅಕ್ಕಿ!ನಾವು ಈ ಅಕ್ಕಿ ತಿಂದು ಸಾಯಬೇಕಾ?ಎಂದ್ರು ಗ್ರಾಮಸ್ಥರು!

ಕಾರ್ಕಳ:ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ರಾಜ್ಯ ಸರಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಪತ್ತೆಯಾಗಿರುವ ಬೆನ್ನಲ್ಲೇ ಇದೀಗ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಮಿರಿ ಮಿರಿ ಮಿಂಚುವ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಹೌದು ಬೆಳ್ಮಣ್ ಸೊಸೈಟಿಯಲ್ಲಿ ನೀಡಲಾಗಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಈ ಅಕ್ಕಿ ನೋಡಿದ ಗ್ರಾಮಸ್ಥರು ಕಂಗಾಲಾಗಿ ಪಂಚಾಯತ್ ಗೆ ದೂರು ನೀಡಿದ್ದಾರೆ. ಅವರಿಗೆ […]