ಉಡುಪಿ: ಇಂದಿನ ಕೊರೊನಾ ಪ್ರಕರಣಗಳ ವಿವರ ಹೀಗಿದೆ.!

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, 905 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 420, ಕುಂದಾಪುರ ತಾಲೂಕಿನಲ್ಲಿ 246, ಕಾರ್ಕಳ ತಾಲೂಕಿನಲ್ಲಿ 233 ಹಾಗೂ ಹೊರ ಜಿಲ್ಲೆಯ ಆರು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6015 ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೂಡ ಮೂರು ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 70 ವರ್ಷದ ವೃದ್ಧ, 69 ವರ್ಷದ ಮಹಿಳೆ ಹಾಗೂ ಕುಂದಾಪುರ ತಾಲೂಕಿನ 78 ವರ್ಷದ ವೃದ್ಧರೊಬ್ಬರು […]
ಕಾರ್ಕಳದ ಶಿರ್ಲಾಲಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಕಾರ್ಕಳ:ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಗುರುವಾರ ಕಂಡುಬಂದಿದ್ದು ಶಿರ್ಲಾಲ್ ನಲ್ಲಿ ಆಂಜನೇಯ ಭಜನಾ ಮಂಡಳಿಯ ಪಕ್ಕದಲ್ಲಿ ದೊಡ್ಡ ಗಾತ್ರದ ಬೆಳಗ್ಗೆ ಕಾಣಿಸಿಕೊಂಡಿತು. ಹಾವಾಡಿಗ ಮಂಜುನಾಥ್ ಕೋಟ್ಯಾನ್ ಹಾವನ್ನು ಹಿಡಿದು ಸುರಕ್ಷಿತವಾದ ಸ್ಥಳಕ್ಕೆ ಬಿಟ್ಟಿದ್ದಾರೆ. ವಿಡಿಯೋ-ಮಾಹಿತಿ:ಶಬರೀಶ್ ಶಿರ್ಲಾಲ್
ಉಡುಪಿ: ನಾಳೆಯಿಂದ (ಮೇ 28) ಬ್ಯಾಂಕ್ ಗಳ ವ್ಯವಹಾರ ಅವಧಿಯಲ್ಲಿ ಬದಲಾವಣೆ

ಉಡುಪಿ: ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಾಳೆಯಿಂದ (ಮೇ 28) ಜೂನ್ 6ರ ವರೆಗೆ ಬ್ಯಾಂಕ್ ಗಳ ವ್ಯವಹಾರ ಅವಧಿಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಕಚೇರಿಯ ಕರ್ತವ್ಯದ ಅವಧಿಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಗದಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ದ.ಕ-ಉಡುಪಿ ಜಿಲ್ಲೆಯ ಪಡಿತರದಾರರಿಗೆ ನವೆಂಬರ್ ತಿಂಗಳಿನಿಂದ ಕೆಂಪು ಕುಚ್ಚಲಕ್ಕಿ ಸರಬರಾಜಿಗೆ ಕ್ರಮ: ಸಚಿವ ಕೋಟ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ […]
ಸಮುದ್ರ ಮಧ್ಯೆ ಸಿಲುಕಿಕೊಂಡ ಮೀನುಗಾರಿಕಾ ಬೋಟ್; 10 ಮೀನುಗಾರರ ರಕ್ಷಣೆ

ಮಂಗಳೂರು: ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲಿ ದೂರದಲ್ಲಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ 10 ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ ಲಾರ್ಡ್ ಆಫ್ ದಿ ಓಷಿಯನ್ ಬೋಟ್ ಎಂಜಿನ್ ಸಮಸ್ಯೆಯಿಂದ ಸಮುದ್ರ ಮಧ್ಯೆ ಸಿಲುಕಿಕೊಂಡಿತ್ತು. ಕೂಡಲೇ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ, ಐಸಿಜಿ ರಾಜದೂತ್ ಹಡಗನ್ನು ಸ್ಥಳಕ್ಕೆ ಕಳುಹಿಸಿತ್ತು. ರಾಜದೂತ್ ಹಡಗಿನ ಮೂಲಕ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ಹಾಗೂ ಅದರಲ್ಲಿದ್ದ 10 ಜನ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ […]