ಕಾರ್ಕಳ: ವಿಷ ಸೇವಿಸಿ ವೃದ್ಧ ದಂಪತಿಗಳಿಬ್ಬರು ಆತ್ಮಹತ್ಯೆ
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ದಂಪತಿಗಳಿಬ್ಬರು ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತರನ್ನು ಕೆನರಾ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಕೆ.ಪಿ ಅನಂತ ಪ್ರಭು ಹಾಗೂ ಅವರ ಪತ್ನಿ ಕೆ.ಪಿ ಪದ್ಮಾ ಪ್ರಭು (82) ಎಂದು ಗುರುತಿಸಲಾಗಿದೆ. ಕೆ.ಪಿ. ಪದ್ಮಾಪ್ರಭು ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಪತಿ ಹಾಗೂ ಪತ್ನಿ ಇಬ್ಬರು ವಿಷ ತೆಗೆದುಕೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಂಪತಿಗಳಿಬ್ಬರು […]
ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ
ಉಡುಪಿ ಜೂ1: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವoತೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಗ್ರಾಮ ಪಂಚಾಯತ್‌ಗಳಲ್ಲಿ ಯಾವುದೇ ಹೊಸ ಕೋವಿಡ್ ಪ್ರಕರಣಗಳು ಕಂಡುಬರದoತೆ ಕಾರ್ಯನಿರ್ವಹಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಜೂ1: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕಾರ್ಯೋನ್ಮುಖವಾಗುವಂತೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳೊoದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಎಲ್ಲಾ ಗ್ರಾಮಗಳು 10 ದಿನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಪ್ರಸ್ತುತ ಕಂಡು ಬಂದಿರುವ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಿ, ಯಾವುದೇ ಹೊಸ ಪ್ರಕರಣಗಳು ಕಂಡುಬರದoತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ […]
ಉಡುಪಿ ಮಲಬಾರ್ ಗೋಲ್ಡ್ ವತಿಯಿಂದ ರೇಷನ್ ಕಿಟ್ ವಿತರಣೆ
ಉಡುಪಿ: ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಒಟ್ಟು 126 ಅರ್ಹ ಫಲಾನುಭವಿ ಕುಟುಂಬಗಳಿಗೆ ಪಡಿತರ ಕಿಟ್ ಗಳನ್ನು ವಿತರಿಸಲಾಯಿತು. ಉಡುಪಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ಪಡಿತರ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಮೊದಲಾದವರು ಉಪಸ್ಥಿತರಿದ್ದರು. ಅದೇ ರೀತಿ ಸಮಾಜ ಸೇವಕ ಸುಧೀರ್ ನಾಯಕ್ ಮನವಿ […]
ಕೋವಿಡ್ 3ನೇ ಅಲೆ ಎದುರಿಸಲು ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜೂ1: ಜಿಲ್ಲೆಯಲ್ಲಿ ಪ್ರಸುತ ಕೋವಿಡ್ 2 ನೇ ಅಲೆಯು ಕಡಿಮೆಯಾಗುತ್ತಿದ್ದು, ಮುಂದೆ ಕೋವಿಡ್ 3 ನೇ ಅಲೆ ಕಂಡುಬರುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈಗಿನಿಂದಲೇ ಅದನ್ನು ಎದುರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವ ಅಗತ್ಯವಿದ್ದು ಈ ಬಗ್ಗೆ ಜಿಲ್ಲೆಯ ವೈದ್ಯಕೀಯ ಪರಿಣಿತರ ತಂಡದ ಸದಸ್ಯರು ಸೂಕ್ತ ಯೋಜನೆ ರೂಪಿಸಲು ತಮ್ಮ ಸಲಹೆಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್ಪರ್ಟ್ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]