ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹಾವು ಏಣಿ ಆಟ ಮುಂದುವರಿದಿದ್ದು, ಇಂದು(ಜೂನ್ 3) ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇಂದು 580 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 324, ಕುಂದಾಪುರ ತಾಲೂಕಿನಲ್ಲಿ 129, ಕಾರ್ಕಳ ತಾಲೂಕಿನಲ್ಲಿ‌ 123 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4533 ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಜಿಲ್ಲೆಯಲ್ಲಿ ಒಟ್ಟು […]

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ.ಜಯಾ (77) ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ನಿಧನ ಹೊಂದಿದರು. ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. 1958ರಲ್ಲಿ ‘ಭಕ್ತ ಪ್ರಹ್ಲಾದ’ ಸಿನಿಮಾ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿದ್ದ ಜಯಾ ಅವರು, ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ರಂಗಭೂಮಿ, ಕಿರುತೆರೆಯಲ್ಲೂ ಹಲವು ಪಾತ್ರಗಳನ್ನು ನಿಭಾಯಿಸಿದ್ದರು. ಹಾಸ್ಯನಟಿಯಾಗಿ ಹೆಚ್ಚು ಖ್ಯಾತಿ […]

ಉಡುಪಿ: ಜಿಲ್ಲೆಯ ಮತ್ತೆ ಏಳು ಗ್ರಾಪಂಗಳಲ್ಲಿ ಕಂಪ್ಲೀಟ್ ಲಾಕ್ ಡೌನ್: ನಾಳೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಉಡುಪಿ (ಉಡುಪಿ ಎಕ್ಸ್‌ಪ್ರೆಸ್‌): ಕೋವಿಡ್ 19 ಸೋಂಕಿತರ ಸಂಖ್ಯೆ 50ಕ್ಕಿಂತ ಹೆಚ್ಚು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಮತ್ತೆ 7 ಗ್ರಾಮ ಪಂಚಾಯತ್ ಗಳಲ್ಲಿ ಜೂನ್ 5ರಿಂದ ಎರಡು ದಿನಗಳ ಕಾಲ ಜಿಲ್ಲಾಡಳಿತ ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಿದೆ. ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ, ಕಾರ್ಕಳ ತಾಲೂಕಿನ ಕಲ್ಯ ಹಾಗೂ ಕುಂದಾಪುರ ತಾಲೂಕಿನ ತಲ್ಲೂರು, ಯಡಮೊಗೆ ಮತ್ತು ಕರ್ಕುಂಜೆ ಗ್ರಾಪಂಗಳಲ್ಲಿ ಜೂನ್ 5ರ ಬೆಳಿಗ್ಗೆ 6ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ಕಂಪ್ಲೀಟ್ ಲಾಕ್ […]

ಉಡುಪಿ: ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಲಸಿಕಾ ಕಾರ್ಯಕ್ರಮ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ 18ರಿಂದ 44 ವರ್ಷದ ಆಯ್ದ ಗುಂಪುಗಳಿಗೆ ಕೋವಿಡ್ 19 ಲಸಿಕಾರಣ ಆರಂಭಿಸುವ ಬಗ್ಗೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅದರಂತೆ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರುವವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದರ ನೋಡಲ್ ಅಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿಯನ್ನು ನೇಮಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಲಸಿಕೆ ನೀಡುವ ಬಗ್ಗೆ ಅನೆಕ್ಸರ್ 3 ಅನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡುವರು. ಅರ್ಹರು ಈ ಕೆಳಕಂಡ ದಾಖಲಾತಿಯೊಂದಿಗೆ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ […]

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಸಹಿಸಲಾಗುತ್ತಿಲ್ಲ; ಕಣ್ಣೀರು ಹಾಕುತ್ತಾಳೆ ರಾಜೀನಾಮೆ ಘೋಷಿಸಿದ ಶಿಲ್ಪಾನಾಗ್

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರು ಇಂದು ದಿಢೀರ್ ಆಗಿ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್ ಅವರು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪಗಳ ಸುರಿಮಳೆಗೈದಿದ್ದಾರೆ. ಪಾಲಿಕೆ ವಿರುದ್ಧ ಸಮರ ಸಾರುತ್ತಿದ್ದಾರೆ. ನಗರಕ್ಕೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಏನೂ ಕೆಲಸ ಮಾಡಿಲ್ಲ ಎಂಬ ಪಟ್ಟಕಟ್ಟಿದ್ದಾರೆ ಎಂದು ಬೇಸರ ಹೊರಹಾಕಿದರು. ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ […]