ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದು, ಇಂದು (ಜೂನ್ 4) 561 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 227, ಕುಂದಾಪುರ ತಾಲೂಕಿನಲ್ಲಿ 226, ಕಾರ್ಕಳ ತಾಲೂಕಿನಲ್ಲಿ 106 ಹಾಗೂ ಹೊರ ಜಿಲ್ಲೆಯ 2 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4506 ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 66 ವರ್ಷದ ವ್ಯಕ್ತಿ, ಕಾರ್ಕಳ ತಾಲೂಕಿನ 85 ವರ್ಷದ […]
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 1 ಲಕ್ಷ ಉಚಿತ ಕೋವಿಡ್ ಲಸಿಕೆ ಕೊಡುಗೆ
ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯು ಸರ್ಕಾರದ ಕೋವಿಡ್ ಲಸಿಕಾ ಅಭಿಯಾನಕ್ಕೆ 1 ಲಕ್ಷ ಉಚಿತ ಕೋವಿಡ್ ಲಸಿಕೆಗಳನ್ನು ಕೊಡುಗೆಯಾಗಿ ನೀಡಲು ನಿರ್ಧರಿಸಿದೆ. ಈ ಬಗ್ಗೆ ಮಲಬಾರ್ ಗ್ರೂಪ್‌ನ ಅಧ್ಯಕ್ಷ ಎ.ಪಿ. ಅಹ್ಮದ್ ಮಾತನಾಡಿ, ಕೋವಿಡ್-19 ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಡೀ ದೇಶ ಹೋರಾಟ ಮಾಡುತ್ತಿದೆ. ಈ ಸೋಂಕು ಹರಡುವುದನ್ನು ನಿಯಂತ್ರಿಸಲು ಲಸಿಕಾಕರಣ ಅತ್ಯಂತ ಮುಖ್ಯವಾಗಿದೆ. ಸರ್ಕಾರ ರಾಷ್ಟ್ರವ್ಯಾಪಿ ಕೈಗೊಂಡಿರುವ ಲಸಿಕಾಕರಣ ಅಭಿಯಾನಕ್ಕೆ ಇದು ಸಂಸ್ಥೆಯ […]
ಎಸ್ಸೆಸ್ಸೆಲ್ಸಿ ಪರೀಕ್ಷೆ: ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ; ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಐಚ್ಛಿಕ ಭಾಷೆ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪ್ರಶ್ನೆ ಪತ್ರಿಕೆಯಲ್ಲಿ 120 ಅಂಕಗಳಿರುತ್ತದೆ. ಪರೀಕ್ಷೆಗೆ ಮೂರು ಗಂಟೆ ಅವಧಿ […]
ಗ್ರೇಡಿಂಗ್ ಆಧಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್ ನೀಡಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ, ತೃಪ್ತಿ ಇಲ್ಲ ಎಂದರೆ ಅಂತಹ ವಿದ್ಯಾರ್ಥಿಗಳಿಗೆ […]
ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ, ಇಲ್ಲದಿದ್ದರೆ ಪರೀಕ್ಷೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ನಡೆಸಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಈಗಿನ ತಾತ್ಕಾಲಿಕ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು. ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಜುಲೈ 3ನೇ […]