ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶ್ವ ಪರಿಸರ ದಿನಾಚರಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಭೂಮಿ ನಮ್ಮ ತಾಯಿ. ಆಕೆಯ ಮಕ್ಕಳು ನಾವು. ಆದರೆ ಇಂದು ಭೂಮಿ ತಾಯಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆಕೆಯನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ […]
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 30ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಕೊರೊನಾ ಗೆಲ್ಲೋಣ ಅಭಿಯಾನದಡಿ ಅತೀ ಅಗತ್ಯವಿರುವ 30ಕ್ಕೂ ಅಧಿಕ ನೊಂದ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ಶನಿವಾರ ಸಂಸ್ಥೆಯ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ‍್ದೇಶಕರಾದ ಅತಿ ಫರ‍್ಡಿನಾಂಡ್ ಗೊನ್ಸಾಲ್ವಿಸ್ ಕೆಥೊಲಿಕ್ ಸಭಾ ವತಿಯಿಂದ ಕೊರೋನಾ ಗೆಲ್ಲೋಣ ಅಭಿಯಾನದಡಿ ನೊಂದವರಿಗೆ ಸಾಂತ್ವಾನ ಸಹಾಯ ಮಾಡುವ ಕೆಲಸ ಶ್ಲಾಘನೀಯ ಇದು ಹೀಗೆ ಮುಂದುವರೆಯಲಿ. ನೊಂದ ಕುಟುಂಬಗಳಿಗೆ ಆಸರೆ […]
ಗ್ರಾಪಂ, ನಗರ, ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ: ಸಚಿವ ಕೋಟ
ಬೆಂಗಳೂರು: ರಾಜ್ಯದಾದ್ಯಂತ 6020ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮತ್ತು ಇತರ ನಗರ, ಸ್ಥಳೀಯಾಡಳಿತ ಸಂಸ್ಥೆಗಳ ಸುಮಾರು 1ಲಕ್ಷ ಜನಪ್ರತಿನಿಧಿಗಳನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ತುರ್ತು ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಡಿರುವ ಮನವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಒಪ್ಪಿಗೆ ನೀಡಿ […]
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಇಳಿಮುಖ; ಇಂದಿನ ಕೊರೊನಾ ಪ್ರಕರಣಗಳ ವಿವರ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹಾದಿಯಲ್ಲಿ ಸಾಗುತ್ತಿದ್ದು, ಇಂದು (ಜೂನ್ 5) 552 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 208, ಕುಂದಾಪುರ ತಾಲೂಕಿನಲ್ಲಿ 139, ಕಾರ್ಕಳ ತಾಲೂಕಿನಲ್ಲಿ 197 ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 4323ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 70 ವರ್ಷದ ವೃದ್ಧರೊಬ್ಬರು ಸೋಂಕಿನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 342 […]
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್: 2020-21ನೇ ಸಾಲಿನಲ್ಲಿ ₹5.88 ಕೋಟಿ ಲಾಭ; ಯಶ್‌ಪಾಲ್ ಎ. ಸುವರ್ಣ
ಉಡುಪಿ: ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2020-21ನೇ ಸಾಲಿನಲ್ಲಿ ₹5.88 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ 2020-21ನೇ ಸಾಲಿನಲ್ಲಿ ₹ 243.37 ಕೋಟಿ ಠೇವಣಿ ಸಂಗ್ರಹ ಹಾಗೂ ₹ 177.44 […]