ಜಯಕರ ಶೆಟ್ಟಿ ಇಂದ್ರಾಳಿಯವರ ಕಾರ್ಯವೈಖರಿ ಸರ್ವ ಸಹಕಾರಿಗಳಿಗೆ ಆದರ್ಶವಾಗಲಿ: ಯಶ್‍ಪಾಲ್ ಸುವರ್ಣ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕರಾಗಿ ಆಯ್ಕೆಯಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಅವರು ಸನ್ಮಾನಿಸಿ ಅಭಿನಂದಿಸಿದರು. ಬಳಿಕ ಮಾತನಾಡಿದ ಯಶ್ ಪಾಲ್ ಅವರು, ಜಯಕರ ಶೆಟ್ಟಿಯವರು ಸಹಕಾರ ಕ್ಷೇತ್ರದ ತಮ್ಮ ವಿಶಿಷ್ಟ ಸೇವೆಯಿಂದಾಗಿ ಅರ್ಹವಾಗಿಯೇ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇವರ ಈ ಸೇವೆ ಸಹಕಾರಿ ಕ್ಷೇತ್ರದವರಿಗೆ ಆದರ್ಶವಾಗಲಿ ತಿಳಿಸಿದರು. ಸನ್ಮಾನ ಸ್ವೀಕರಿಸಿದ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ […]

ಕೊರೊನಾ ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು: ಯಶ್‍ಪಾಲ್ ಸುವರ್ಣ

ಉಡುಪಿ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕಾಪು ಪತ್ರಕರ್ತರ ಸಂಘದ 75 ಸದಸ್ಯರಿಗೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಮ್ಮ ವೈಯುಕ್ತಿಕ ನೆಲೆಯಲ್ಲಿ ಪಡಿತರ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‍ಪಾಲ್ ಸುವರ್ಣ ಕೊರೊನಾ ಲಾಕ್‍ಡೌನ್ ಸಂಕಷ್ಟದ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿ ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು. ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ […]

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮತ್ತಷ್ಟು ಇಳಿಕೆ; ಇಂದಿನ ಕೊರೊನಾ ಪ್ರಕರಣಗಳ ವಿವರ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು (ಜೂನ್ 8) 204 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 95, ಕುಂದಾಪುರ ತಾಲೂಕಿನಲ್ಲಿ 49, ಕಾರ್ಕಳ ತಾಲೂಕಿನಲ್ಲಿ‌ 51 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3783 ಇಳಿದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 75 ವರ್ಷದ ವೃದ್ಧೆ ಹಾಗೂ ಕುಂದಾಪುರ ತಾಲೂಕಿನ 23 ವರ್ಷದ […]

ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ

ಉಡುಪಿ: ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಶ್ರೀ ರುಕ್ಮಿಣೀ ಸತ್ಯಭಾಮಾ ಸಹಿತ ಅನ್ನವಿಠಲ ದೇವರ ಪೂಜೆಯನ್ನು 48ವರ್ಷಗಳ ಕಾಲ ಸಲ್ಲಿಸಿ ಮೂರು ಪರ್ಯಾಯ ಮಹೋತ್ಸವವನ್ನು ವೈಭವದಿಂದ ನಡೆಸಿದ ಮಹಾಮಹಿಮರಾದ ಶೀರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 58ನೇ ಜನ್ಮದಿನ ಹಾಗೂ ಜನ್ಮ ನಕ್ಷತ್ರ ದಿನವಾದ ಮಂಗಳವಾರ ಶೀರೂರು ಶ್ರೀಗಳ ಪೂರ್ವಶ್ರಮದ ಕುಟುಂಬಿಕರ ಮನೆಯಲ್ಲಿ ಸಹೋದರ ಲಾತವ್ಯ ಆಚಾರ್ಯರ ನೇತೃತ್ವದಲ್ಲಿ ಹಾಗೂ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿಯವರ ಸಾಂದಿಪನಿ ಸಾಧನಾಶ್ರಮದಲ್ಲಿ ದೇವರಿಗೆ ವಿಶೇಷ […]

ಪರಿಣಾಮಕಾರಿ ಲಾಕ್ ಡೌನ್ ನಿಂದ ಕೋವಿಡ್ ಇಳಿಕೆ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್‌ಗಳನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮುಂದುವರೆಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಐದು ದಿನಗಳಿಂದ 50 ಕ್ಕೂ ಹೆಚ್ಚು ಪ್ರಕರಣಗಳು ಇರುವ ಗ್ರಾಮಪಂಚಾಯತ್‌ಗಳನ್ನು ಪೂರ್ಣ […]