ಉಡುಪಿ: ಜಿಲ್ಲೆಯ 16 ಗ್ರಾಮ ಪಂಚಾಯತ್ ಗಳಲ್ಲಿ ಸೀಲ್ ಡೌನ್ ಮುಂದುವರಿಕೆ; ಡಿಸಿ ಜಗದೀಶ್

ಉಡುಪಿ (ಉಡುಪಿ ಎಕ್ಸ್‌ಪ್ರೆಸ್‌): ಕೋವಿಡ್ ನಿಯಂತ್ರಣಕ್ಕೆ ಸೀಲ್ ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್‌ಗಳನ್ನು ನಾಳೆ (ಜೂನ್ 9) ಬೆಳಿಗ್ಗೆ 11ರಿಂದ ಜೂನ್ 14ರ ವರೆಗೆ ಸೀಲ್ ಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಪ್ರಸಕ್ತ 50ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ ಬೆಳ್ಮಣ್, ಮಿಯಾರು, ಪಳ್ಳಿ, ಕುಕ್ಕುಂದೂರು, […]

ಹಾನಗಲ್‌ ಕ್ಷೇತ್ರದ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು: ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. 1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಅವರು 1985 ರಲ್ಲಿ ಜನತಾಪಕ್ಷದಿಂದ ಗೆಲುವು ಸಾಧಿಸಿದ್ದರು. 1994ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು.  ದಳ ಇಬ್ಭಾಗ ಆದ ನಂತರ ಅವರು ಬಿಜೆಪಿ ಸೇರ್ಪಡೆಗೊಂಡರು. 2004, 2008 ಮತ್ತು 2018 ರಲ್ಲಿ ಬಿಜೆಪಿಯಿಂದ ಗೆದ್ದಿದ್ದರು. 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಾರಿಗೆ, ಲೋಕೋಪಯೋಗಿ […]

ಸಿಎಂ ಬದಲಾವಣೆ: ಕುತೂಹಲಕ್ಕೆ ಕಾರಣವಾದ ಶಾಸಕ ಸುನಿಲ್ ಕುಮಾರ್ ಟ್ವೀಟ್

ಉಡುಪಿ: ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಹೀಗಾಗಿ‌ ನಮ್ಮ ಅಭಿಪ್ರಾಯವನ್ನು‌ ಹೇಳಲು ಪಕ್ಷದ ವರಿಷ್ಠರು ಕೂಡಲೇ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಕಾರ್ಕಳ ಶಾಸಕರಾಗಿರುವ ವಿಧಾನಸಭೆ ಮುಖ್ಯ ಸಚೇತಕ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಕಳೆದ 3 ದಿನಗಳಿಂದ ಮಾಧ್ಯಮಗಳಲ್ಲಿ ಪಕ್ಷದ ನಾಯಕರ ಹೇಳಿಕೆಗಳು ಹರಿದಾಡುತ್ತಿದ್ದು, ಇದು ಪಕ್ಷಕ್ಕೆ ಒಳಿತಲ್ಲ. ಕೆಲವು ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳಲ್ಲಿ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದ್ದರಿಂದ […]

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

ಉಡುಪಿ: ಕಳೆದ ಐದು ವರ್ಷಗಳ ಹಿಂದೆ ಉಡುಪಿ ಇಂದ್ರಾಳಿಯ ಮನೆಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮ ಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ, ಮಗ ಸಹಿತ ಮೂವರಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಇಂದು ಮಹತ್ವದ ತೀರ್ಪು ನೀಡಿದೆ. ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಶಿಕ್ಷೆಗೆ ಗುರಿಯಾದ ಆರೋಪಿಗಳು. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು […]

ಸಿಇಟಿ ಪರೀಕ್ಷೆಯ ದಿನಾಂಕ ಘೋಷಣೆ; ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ದಿನಾಂಕವನ್ನು ಸರ್ಕಾರ ಘೋಷಿಸಿದೆ. ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಿಇಟಿ ಪರೀಕ್ಷೆಯ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 ಅಂಕಗಳ ಪರೀಕ್ಷೆ […]